ಬೆಂಗಳೂರು: ಜಮೀನಿನ ಖಾತಾ ಬದಲಾವಣೆಗೆ 10 ಲಕ್ಷ ರೂ.ಲಂಚಕ್ಕೆ ಬೇಡಿಕೆಯಿಟ್ಟಿದ್ದ ವಿಶೇಷ ತಹಶೀಲ್ದಾರ್ ಹಾಗೂ ಅವರಿಗೆ ಸಹಕರಿಸಿದ್ದ ಮಧ್ಯವರ್ತಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಉತ್ತರ ವಿಭಾಗದ ವಿಶೇಷ ತಹಶೀಲ್ದಾರ್ ವರ್ಷಾ ಒಡೆಯರ್ ಹಾಗೂ ಮಧ್ಯವರ್ತಿ ರಮೇಶ್ ಬಂಧಿತರು.
ದಾಸನಪುರದ ನಿವಾಸಿ ಕಾಂತರಾಜು ಎಂಬುವವರು ತಮ್ಮ ಜಮೀನಿನ ಖಾತಾ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು. ಖಾತಾ ಬದಲಾವಣೆ ಮಾಡಿಕೊಡಲು ಆರೋಪಿ ವರ್ಷಾ 10 ಲಕ್ಷ ರೂ.ಲಂಚಕ್ಕೆ ಬೇಡಿಕೆಯಿಟ್ಟಿದ್ದರು.
ಲಂಚ ಕೊಡಲು ಇಚ್ಛಿಸದ ಕಾಮತರಾಜು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು ಮಂಗಳವಾರ ಸಂಜೆ ದೂರುದಾರರಿಂದ ವರ್ಷಾ ಲಂಚ ಪಡೆಯುತ್ತಿದ್ದಾಗ ಟ್ರ್ಯಾಪ್ ಕಾರ್ಯಾಚರಣೆ ನಡೆಸಿ 5 ಲಕ್ಷ ರೂ. ಜಪ್ತಿ ಮಾಡಿದೆ.
Laxmi News 24×7