ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಆರೋಪಿ, ಐಪಿಎಸ್ ಅಧಿಕಾರಿ ಅಮ್ರಿತ್ ಪೌಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಬುಧವಾರ ಸಿಐಡಿ ತಂಡವು ಮತ್ತೆ ವಶಕ್ಕೆ ಪಡೆದುಕೊಂಡಿದೆ.
ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗೆ ನ್ಯಾಯಾಲಯದ ಅನುಮತಿ ಪಡೆದು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ಹೇಳಿವೆ.