Breaking News

ಮತದಾರರ ಮಾಹಿತಿ ಕಳವಿಗೆ ಮುಖ್ಯಮಂತ್ರಿ ಬೊಮ್ಮಾಯಿ ಕಾರಣ: ಕಾಂಗ್ರೆಸ್‌

Spread the love

ಬೆಂಗಳೂರು: ‘ಖಾಸಗಿ ಸಂಸ್ಥೆಯೊಂದಕ್ಕೆ ಮತದಾರರ ಪಟ್ಟಿ ಪರಿಷ್ಕರಣೆಯ ಅನುಮತಿ ನೀಡಿ, ಮತದಾರರ ಮಾಹಿತಿ ಕಳವಿಗೆ ಬೆಂಗಳೂರು ಉಸ್ತುವಾರಿ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರಣರಾಗಿದ್ದಾರೆ’ ಎಂದು ಆರೋಪಿಸಿರುವ ಪ್ರತಿಪಕ್ಷ ಕಾಂಗ್ರೆಸ್, ‘ಮುಖ್ಯಮಂತ್ರಿ ಸ್ಥಾನಕ್ಕೆ ಅವರು ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದೆ.

 

‘ಮುಖ್ಯಮಂತ್ರಿ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಂಧಿಸಬೇಕು. ಇಡೀ ಪ್ರಕರಣದ ಬಗ್ಗೆ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು’ ಎಂದೂ ಒತ್ತಾಯಿಸಿರುವ ಕಾಂಗ್ರೆಸ್‌ ನಾಯಕರು, ಪೊಲೀಸ್‌ ಕಮಿಷನರ್‌ಗೆ ದೂರು ನೀಡಿದ್ದಾರೆ.

ಈ ಬೆನ್ನಲ್ಲೇ, ಬಿಬಿಎಂಪಿ ವಿಶೇಷ ಆಯುಕ್ತ ಎಸ್. ರಂಗಪ್ಪ ಅವರು ನೀಡಿದ ದೂರಿನ ಅನ್ವಯ ಚಿಲುಮೆ
ಸಂಸ್ಥೆಯ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಈ ಪ್ರಕರಣದ ಬಗ್ಗೆ ಕೂಲಂಕಶ ವಿಚಾರಣೆ ನಡೆಸಲು ನಾಲ್ವರು ವಿಶೇಷ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್ ತಿಳಿಸಿದ್ದಾರೆ.

ಈ ಆರೋಪವನ್ನು ತಳ್ಳಿ ಹಾಕಿರುವ ಮುಖ್ಯಮಂತ್ರಿ ಬೊಮ್ಮಾಯಿ , ‘ಕಾಂಗ್ರೆಸ್ ನಾಯಕರು ಸಂಬಂಧ ಇಲ್ಲದ್ದನ್ನು ಕೇಳುತ್ತಿದ್ದಾರೆ. ಆದರೂ, ಇಡೀ ಪ್ರಕರಣದ ಸಮಗ್ರ ತನಿಖೆಗೆ ಸೂಚನೆ ನೀಡುತ್ತೇನೆ. ನಿಜ ಹೊರಗೆ ಬರಲಿ’ ಎಂದಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಜೊತೆ ಗುರುವಾರ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ, ‘ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಗೆ ಮತದಾರರ ಜಾಗೃತಿ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆಗೆ ಇದೇ ಆ. 20ರಂದು ಅನುಮತಿ ನೀಡಲಾಗಿತ್ತು. ಈ ಸಂಸ್ಥೆಯವರು ಮತದಾರರ ಮಾಹಿತಿ ಪಡೆಯಲು ತಮ್ಮ ಸಿಬ್ಬಂದಿಗೆ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಎಂಬ ಗುರುತಿನ ಚೀಟಿ ನೀಡಿದ್ದಾರೆ. ಸರ್ಕಾರಿ, ಅರೆ ಸರ್ಕಾರಿ ಸಿಬ್ಬಂದಿ ಹೊರತಾಗಿ ಬೇರೆಯವರು ಬಿಎಲ್‌ಒ ಆಗಲು ಸಾಧ್ಯವಿಲ್ಲ’ ಎಂದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ