Breaking News

ಡಿಸೆಂಬರ್ 19ರಿಂದ 29ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

Spread the love

ಬೆಂಗಳೂರು: ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಡಿ.19 ರಿಂದ 29 ರವರೆಗೆ ಬೆಳಗಾವಿಯಲ್ಲಿ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

 

 

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಈ ವಿಷಯ ತಿಳಿಸಿದರು.

 

 

 

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಈ ವಿಷಯ ತಿಳಿಸಿದರು.

‘ರೈತರು ಖಾಸಗಿ ಜಮೀನಿನಲ್ಲಿ ಶ್ರೀಗಂಧವನ್ನು ಬೆಳೆಸಿ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ನೀಡುವ ‘ಕರ್ನಾಟಕ ರಾಜ್ಯ ಶ್ರೀಗಂಧ ನೀತಿ- 2022’ ಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ವಿವರಿಸಿದರು.

ದೇಶ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಶ್ರೀಗಂಧಕ್ಕೆ ವ್ಯಾಪಕ ಬೇಡಿಕೆ ಇದೆ. ಗಂಧವನ್ನು ಬೆಳೆಸುವ ರೈತರಿಗೆ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡುವುದರ ಜತೆಗೆ, ಗಂಧದ ಮರಕ್ಕೆ ಚಿಪ್‌ ಅಳವಡಿಸಿ ಕಳ್ಳತನ ಆಗುವುದನ್ನು ತಡೆಯಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಕ್ರಮದಿಂದಾಗಿ ರೈತರ ಆದಾಯವೂ ಹೆಚ್ಚಾಗಲಿದೆ ಎಂದರು.

ರಾಜ್ಯದಲ್ಲಿ ಮೈಸೂರ್ ಸೋಪ್ಸ್‌ಗೆ ಗಂಧದ ಮರಗಳು ಕೊರತೆ ಆಗಿರುವ ಕಾರಣ ಆಸ್ಟ್ರೇಲಿಯಾದಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ರೈತರು ಬೆಳೆದ ಗಂಧ ಈ ಕಾರ್ಖಾನೆಗೆ ಪೂರೈಕೆ ಮಾಡುವುದರ ಜತೆಗೆ ಖಾಸಗಿ ಸಂಸ್ಥೆಗಳಿಗೂ ಪೂರೈಕೆ ಮಾಡಬಹುದಾಗಿದೆ. ಹಿಂದೆ ಮುಕ್ತವಾಗಿ ಮಾರಾಟ ಮಾಡುವುದಕ್ಕೆ ನಿರ್ಬಂಧವಿತ್ತು ಎಂದು ಸುಧಾಕರ್‌ ಹೇಳಿದರು


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ