ಬೆಳಗಾವಿ: ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಸವದತ್ತಿ ತಾಲ್ಲೂಕಿನ ಉಗರಗೋಳ ಗ್ರಾಮಕ್ಕೆ ಆಗಮಿಸಿದ್ದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಎರಡು ಮದ್ಯದ ಅಂಗಡಿಗಳಿಗೆ ತೆರಳಿದರು. ಲೈಸೆನ್ಸ್, ಮದ್ಯದ ಸಂಗ್ರಹ ಹಾಗೂ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದರು.
ಡಿ.ಸಿ ಗ್ರಾಮ ಪ್ರವೇಶಿಸುತ್ತಿದ್ದಂತೆ ತಡೆದ ಮಹಿಳೆಯರು, ಊರ ಮಧ್ಯದಲ್ಲಿರುವ ಎರಡು ಮದ್ಯದಂಗಡಿಗಳನ್ನು ಬೇರೆಡೆ ಸ್ಥಳಾಂತರಿಸುವಂತೆ ಒತ್ತಾಯಿಸಿದರು. ಆಗ, ಪಾಟೀಲ ಸ್ವತಃ ಅಂಗಡಿಗಳಿಗೆ ಹೋಗಿ ಪರಿಶೀಲಿಸಿದರು.
ಸದ್ಯ ಮದ್ಯದ ಅಂಗಡಿಗಳನ್ನು ಸ್ಥಗಿತಗೊಳಿಸಲಾಗಿದೆ. ಸಮಗ್ರವಾಗಿ ಪರಿಶೀಲನೆ ನಡೆಸಿದ ನಂತರ, ಅವುಗಳ ಸ್ಥಳಾಂತರ ಕುರಿತು ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.