Breaking News

ಬೆಳಗಾವಿ: ಜನರ ಮನಸೂರೆಗೊಂಡ ಫಲ-ಪುಷ್ಪ ಪ್ರದರ್ಶನ

Spread the love

ಬೆಳಗಾವಿ: ಒಂದೆಡೆ ಕಾಂತಾರ ಚಲನಚಿತ್ರದ ಪರಿಸರ ದೇವತೆ ಪಂಜುರ್ಲಿ, ಇನ್ನೊಂದೆಡೆ ಎತ್ತುಚಕ್ಕಡಿ ಕಟ್ಟಿ ಬಿತ್ತಲು ನಡೆದ ರೈತ, ಮತ್ತೊಂದೆಡೆ ಕೇಶರಾಶಿ ಹರಡಿ ನಿಂತ ಸುಂದರ ಜಲಕನ್ಯೆ, ಎಲ್ಲರನ್ನೂ ಬರಸೆಳೆಯುವ ನೆಚ್ಚಿನ ನಟ ಪುನೀತ್‌ ರಾಜ್‌ಕುಮಾರ್‌…

 

ಇಲ್ಲಿನ ಹ್ಯೂಮ್‌ ಪಾರ್ಕಿನಲ್ಲಿ ಆಯೋಜಿಸಿದ ಮೂರು ದಿನಗಳ 63ನೇ ಫಲ ಪುಷ್ಪ ಪ್ರದರ್ಶನದಲ್ಲಿ ಕಂಡುಬರುವ ದೃಶ್ಯಗಳಿವೆ. ಶುಕ್ರವಾರವೇ ಆರಂಭವಾದ ಈ ಪ್ರದರ್ಶನ ಪರಿಸರ ಪ್ರೇಮಿಗಳನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿದೆ. ವಿವಿಧ ಶಾಲಾ ಮಕ್ಕಳು, ಯುವಜನರು, ರೈತರು, ಗೃಹಿಣಿಯರು ಸಾಕಷ್ಟು ಸಂಖ್ಯೆಯಲ್ಲಿ ಹೂಗಳನ್ನು ನೋಡಲು ದುಂಬಿಗಳಂತೆ ಲಗ್ಗೆ ಇಟ್ಟರು.

ನಾನಾ ತಳಿಯ ಹೂವುಗಳಿಂದ ಮಾಡಿದ ಆಲಂಕಾರಿಕ ಮಾದರಿಗಳು ಎಲ್ಲರ ಗಮನ ಸೆಳೆಯುವಂತಿವೆ. ಹೂವು- ತರಕಾರಿಗಳನ್ನು ಬಳಸಿ ಮಾಡಿದ ಸಂಗೀತದ ಪರಿಕರಗಳು, ನವಿಲು, ಡಿಸ್ನಿಟೈಪ್, ಫೋಟೊಶಾಪ್, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಪುನೀತ್‌ ರಾಜ್‌ಕುಮಾರ್ ಅವರ ಮೂರ್ತಿಗಳು ಆಯಸ್ಕಾಂತದಂತೆ ಸೆಳೆಯುವಂತಿವೆ.

ಮೈಸೂರಿನ ಸ್ಯಾಂಡ್‌ ಮ್ಯೂಸಿಯಂ ಕಲಾವಿದರು ಸಿದ್ಧಪಡಿಸಿದ ‘ಕಾಂತಾರ’ ಚಲನಚಿತ್ರದ ಪರಸರ ದೇವರು ಪಂಜುರ್ಲಿಯ ಮುಖಭಾವದ ಆಕೃತಿ ಮುಖ್ಯ ಆಕರ್ಷಣೆಯಾಗಿದೆ. ಪ್ರತಿಯೊಬ್ಬರೂ ಇದರ ಮುಂದೆ ನಿಂತು ಫೋಟೊ, ಸೆಲ್ಫಿಗಳನ್ನು ಕ್ಲಿಕ್ಕಿಸಿಕೊಂಡು ಸಂಭ್ರಮಿಸುವುದು ಸಾಮಾನ್ಯವಾಗಿದೆ.


Spread the love

About Laxminews 24x7

Check Also

ಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್

Spread the loveಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್ ಜುಲೈ ಒಂದರಿಂದ ಆರಂಭಗೊಂಡಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ