Breaking News

ಮಂಗಳೂರಿನ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್

Spread the love

ಹುಬ್ಬಳ್ಳಿ: ಮಂಗಳೂರಿನ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ನಕಲಿ ವಿಳಾಸ ಪತ್ತೆಯಾಗಿದ್ದು, ಅದು ಹುಬ್ಬಳ್ಳಿಯ ಪ್ರೇಮ್ ರಾಜ್ ಅವರಿಗೆ ಸೇರಿದೆ.

ಆಟೋರಿಕ್ಷಾದಲ್ಲಿ ಪತ್ತೆಯಾದ ಆಧಾರ ಕಾರ್ಡ್ ಹುಬ್ಬಳ್ಳಿಯ ಕೇಶ್ವಾಪುರ ಮಧುರಾ ಕಾಲೋನಿ ನಿವಾಸಿ ಪ್ರೇಮರಾಜ್ ಹೆಸರಿನಲ್ಲಿದೆ.

ಆದರೆ ಈ ಆಧಾರ್ ಕಾರ್ಡ್ ಕಳೆದು ಹೋಗಿತ್ತು. ಇವರದೇ ವಿಳಾಸವನ್ನು ಬ್ಲಾಸ್ಟ್ ನಲ್ಲಿ ಬಳಕೆ ಮಾಡಲಾಗಿದೆ. ಪ್ರೇಮ್ ರಾಜ್‌ಗೂ ಈ ಪ್ರಕರಣಕ್ಕೆ ಸಂಬಂಧ ಇಲ್ಲ ಎನ್ನುತ್ತಿದ್ದಾರೆ ಕುಟುಂಬದವರು.

“ನನ್ನ ಮಗ ಅಂಥವನಲ್ಲ. ಈ ಪ್ರಕರಣಕ್ಕೂ ನನ್ನ ಮಗನಿಗೂ ಯಾವುದೇ ಸಂಬಂಧವಿಲ್ಲ. ಈಗ ದಾಖಲಾತಿ ಪರಿಶೀಲನೆ ನಡೆಯುತ್ತಿದೆ. ಪೊಲೀಸರು ಕೇಳಿದ ಎಲ್ಲ ಮಾಹಿತಿ ಹಂಚಿಕೊಂಡಿದ್ದೇವೆ. ಪ್ರೇಮರಾಜ್ ಆಧಾರ ಕಾರ್ಡ್ ಕಳೆದುಕೊಂಡಿದ್ದ. ಆಗ ದೂರು ಕೊಡು ಎಂದು ಸಲಹೆ ಕೊಟ್ಟಿದ್ದೆ. ತುಮಕೂರಿನಲ್ಲಿ ನನ್ನ ಮಗನ ವಿಚಾರಣೆ ಮಾಡಿದ್ದಾರೆ. ಈ ಬಗ್ಗೆ ಬೆಳಗ್ಗೆ ನನ್ನ ಮಗನ‌ ಜೊತೆ ಮಾತನಾಡಿದ್ದೇನೆ” ಎಂದು ಅವರ ತಂದೆ ಮಾರುತಿ ಹುಟಗಿ ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ