Breaking News

ಮಂಗಳೂರು ಸ್ಫೋಟಕ್ಕೂ ಪ್ರೇಮರಾಜ್‌ಗೂ ಸಂಬಂಧವಿಲ್ಲ: ಡಿಜಿಪಿ

Spread the love

ಮಂಗಳೂರು: ನಗರದ ಗರೋಡಿಯಲ್ಲಿ ಆಟೊರಿಕ್ಷಾದಲ್ಲಿ ಶನಿವಾರ ಸಂಜೆ ಸಂಭವಿಸಿದ ಸ್ಪೋಟ ಪ್ರಕರಣಕ್ಕೂ ಪ್ರೇಮರಾಜ್‌ಗೂ ಸಂಬಂಧವಿಲ್ಲ ಎಂದು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಭಾನುವಾರ ಟ್ವೀಟ್‌ ಮಾಡಿರುವ ಅವರು, ‘ಪ್ರೇಮರಾಜ್‌ ದಾಖಲೆಗಳು ಕಳವಾಗಿದ್ದವು.

ಅವರಿಗೂ ಈ ಸ್ಫೋಟ ಪ್ರಕರಣಕ್ಕೂ ಸಂಬಂಧ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಕೃತ್ಯದ ಸ್ಥಳದಲ್ಲಿ ಪ್ರೇಮರಾಜ್‌ ಹುಟಗಿ ಅವರ ಆಧಾರ್‌ ಕಾರ್ಡ್‌ ಪತ್ತೆಯಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಬಿತ್ತಿರಿಸಿದ್ದವು.

ಸ್ಫೋಟ ಸಂಭವಿಸುವಾಗ ರಿಕ್ಷಾದಲ್ಲಿದ್ದ ಪ್ರಯಾಣಿಕನ ಹೆಸರನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ