Breaking News
Home / ಜಿಲ್ಲೆ / ಬೆಂಗಳೂರು / ರಂಗೇರತೊಡಗಿದೆ ಉಪ ಸಮರ, ಮೂರೂ ಪಕ್ಷಗಳಿಂದ ಗೇಮ್ ಪ್ಲಾನ್

ರಂಗೇರತೊಡಗಿದೆ ಉಪ ಸಮರ, ಮೂರೂ ಪಕ್ಷಗಳಿಂದ ಗೇಮ್ ಪ್ಲಾನ್

Spread the love

ಬೆಂಗಳೂರು, ಅ.4- ಉಪಚುನಾವಣೆ ಕಣ ರಂಗೇರತೊಡಗಿದೆ. ನವೆಂಬರ್ 3ರಂದು ನಡೆಯಲಿರುವ ಬೆಂಗಳೂರಿನ ರಾಜರಾಜೇಶ್ವರಿ ನಗರ, ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಸಲು ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳು ರಣತಂತ್ರ ರೂಪಿಸಿದ್ದು, ಸದ್ದಿಲ್ಲದೆ ಪ್ರಚಾರ ಕಾರ್ಯದಲ್ಲಿ ತೊಡಗಿವೆ.

ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಸವಾಲಾಗಿರುವ ಉಪಚುನಾವಣೆಯಲ್ಲಿ ಗೆಲುವು ಸಾಸಲು ನಾಯಕರು ಈಗಾಗಲೇ ಅಖಾಡಕ್ಕಿಳಿದಿದ್ದು, ಎರಡೂ ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಹರಸಾಹಸ ಮಾಡುತ್ತಿದ್ದು, ಕ್ಷೇತ್ರಗಳಲ್ಲಿನ ಹಲವು ಮುಖಂಡರನ್ನು ತಮ್ಮ ತಮ್ಮ ಪಕ್ಷಗಳತ್ತ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಆರ್‍ಆರ್ ನಗರದಲ್ಲಿ ಕಾಂಗ್ರೆಸ್ ತನ್ನ ಕ್ಷೇತ್ರ ಉಳಿಸಿಕೊಳ್ಳಲು ರಣತಂತ್ರ ಹೆಣೆಯುತ್ತಿದ್ದರೆ, ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ತನ್ನ ಕ್ಷೇತ್ರವನ್ನು ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿದೆ.

ಆಡಳಿತಾರೂಢ ಬಿಜೆಪಿ ಈ ಎರಡೂ ಕ್ಷೇತ್ರಗಳನ್ನು ತನ್ನದಾಗಿಸಿಕೊಳ್ಳಲು ಇನ್ನಿಲ್ಲದ ಕಸರತ್ತಿನಲ್ಲಿ ತೊಡಗಿಸಿಕೊಂಡಿದೆ. ಆರ್‍ಆರ್ ನಗರ ವಿಧಾನಸಭಾ ಕ್ಷೇತ್ರದಿಂದ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಆಯ್ಕೆಯಾಗಿದ್ದ ಮುನಿರತ್ನ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿ ಬಿಜೆಪಿ ಸರ್ಕಾರ ಬರಲು ನೆರವಾಗಿದ್ದ ಹಿನ್ನೆಲೆಯಲ್ಲಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಬಹುತೇಕ ಅವರಿಗೆ ಟಿಕೆಟ್ ಸಿಗುವುದು ಖಚಿತವಾಗಿದೆ.

ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ತನ್ನ ನೆಲೆಯನ್ನು ಮತ್ತಷ್ಟು ಭದ್ರಪಡಿಸಿಕೊಳ್ಳಲು ಪ್ರಯತ್ನ ನಡೆಸುತ್ತಿದೆ. ಮೂರೂ ಪಕ್ಷಗಳು ತಮ್ಮದೇ ಆದ ದಾಳ ಉರುಳಿಸುತ್ತಿವೆ. ಇಂದು ನೂರಕ್ಕೂ ಹೆಚ್ಚು ವಕೀಲರುಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಆರ್‍ಆರ್ ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ದಿವಂಗತ ಐಎಎಸ್ ಅಕಾರಿ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.

ಆರ್‍ಆರ್ ನಗರದಲ್ಲಿ ವಕ್ಕಲಿಗ ಮತಗಳು ನಿರ್ಣಾಯಕವಾಗಿರುವುದರಿಂದ ವಕ್ಕಲಿಗರಿಗೆ ಅದರಲ್ಲೂ ಮಹಿಳೆ ಡಿ.ಕೆ.ರವಿ ಅವರ ಪತ್ನಿಯನ್ನು ಕಣಕ್ಕಿಳಿಸಿ ಅನುಕಂಪದ ಮತಗಳನ್ನು ಪಡೆಯಲು ಕಾಂಗ್ರೆಸ್ ತಂತ್ರ ರೂಪಿಸಿದೆ.  ಬಿಜೆಪಿ ನಾಯಕರು ಕೂಡ ಈ ಕ್ಷೇತ್ರದಲ್ಲಿ ಪ್ರತಿತಂತ್ರ ರೂಪಿಸಿ ಈಗಾಗಲೇ ಪ್ರಚಾರದ ಕಣಕ್ಕಿಳಿದಿದ್ದಾರೆ.

ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಮಾಜಿ ಸಂಸದ ಮೂಡಲಗಿರಿಯಪ್ಪ ಅವರ ಪುತ್ರ ಡಾ.ರಾಜೇಶ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಉಪಚುನಾವಣೆಯಲ್ಲಿ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ. ಉಪಚುನಾವಣೆಯಲ್ಲಿ ಮೂರೂ ಪಕ್ಷಗಳು ಸಮಬಲದ ಪೈಪೋಟಿ ನಡೆಸುತ್ತಿದ್ದು, ತಂತ್ರ-ರಣತಂತ್ರ ರೂಪಿಸುತ್ತಿವೆ. ಗೆಲುವಿಗಾಗಿ ಎಲ್ಲ ರೀತಿಯ ಬಲ ಪ್ರದರ್ಶನಗಳನ್ನು ನಡೆಸುತ್ತಿದ್ದು, ಕ್ಷೇತ್ರಗಳಲ್ಲಿ ಈಗಾಗಲೇ ಚುನಾವಣಾ ಕಾವು ರಂಗೇರತೊಡಗಿದೆ.

ಎರಡು-ಮೂರು ದಿನಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳ್ಳಲಿದ್ದು, ನಾಯಕರುಗಳು ಸಮಾಲೋಚನಾ ಸಭೆಗಳನ್ನು ಎಡಬಿಡದೆ ನಡೆಸುತ್ತಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಜಾತಿ-ಜನಾಂಗಗಳ ಮುಖಂಡರು, ಸಂಘ-ಸಂಸ್ಥೆಗಳು, ಪ್ರಭಾವಿಗಳೊಂದಿಗೆ ಈಗಾಗಲೇ ನಾಯಕರು ಮಾತುಕತೆಯಲ್ಲಿ ತೊಡಗಿದ್ದಾರೆ.

ಕಳೆದ ಬಾರಿ ಪಡೆದ ಮತಗಳ ಲೆಕ್ಕಾಚಾರ, ಜಾತಿ-ಮತಗಳ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಮತದಾರರನ್ನು ಸೆಳೆಯಲು ವಿವಿಧ ಆಮಿಷಗಳನ್ನು ಒಡ್ಡುತ್ತಿದ್ದಾರೆ. ರಾಜ್ಯಮಟ್ಟದ ನಾಯಕರು ಈಗಾಗಲೇ ಸ್ಥಳೀಯ ನಾಯಕರ ಜತೆ ಹಲವು ಸುತ್ತಿನ ಮಾತುಕತೆ ನಡೆಸಿ ಮತಬ್ಯಾಂಕ್ ಕೈ ಜಾರದಂತೆ ಎಚ್ಚರ ವಹಿಸುತ್ತಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ