Breaking News
Home / ರಾಜಕೀಯ / ಓದಿನ ಒತ್ತಡ ತಾಳಲಾಗದೆ ನೇಣು ಹಾಕಿಕೊಂಡ ವಿದ್ಯಾರ್ಥಿ

ಓದಿನ ಒತ್ತಡ ತಾಳಲಾಗದೆ ನೇಣು ಹಾಕಿಕೊಂಡ ವಿದ್ಯಾರ್ಥಿ

Spread the love

ಮುದ್ದೇಬಿಹಾಳ: ವಿದ್ಯಾರ್ಥಿಗಳೂ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿದ್ದು, ಇಂದು ಇನ್ನೊಬ್ಬ ವಿದ್ಯಾರ್ಥಿ ಪ್ರಾಣ ಕಳೆದುಕೊಂಡಿದ್ದಾನೆ. ವಿಜಯನಗರ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.

ವಿಜಯಪುರ ಮೂಲದ ನಾಗರಬೆಟ್ಟದ ಖಾಸಗಿ ವಸತಿ ಕಾಲೇಜಿನ ವಿದ್ಯಾರ್ಥಿ ಅಜಯಕುಮಾರ್ ವಿರುಪಾಕ್ಷಿ ನುಚ್ಚಿ (18) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ವಿದ್ಯಾರ್ಥಿ.

ಈತ ನಾಗರಬೆಟ್ಟದ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ.

ನೇಣು ಬಿಗಿದ ಸ್ಥಿತಿಯಲ್ಲಿ ಕಾಲೇಜಲ್ಲೇ ಈತನ ಶವ ಪತ್ತೆಯಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಓದುವ ತೀವ್ರ ಒತ್ತಡ ತಾಳದೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿದ್ದಾರೆ. ಮುದ್ದೇಬಿಹಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ