Breaking News
Home / ಜಿಲ್ಲೆ / ದಾವಣಗೆರೆ / ಸರ್ಕಾರಿ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಹಕ್ಕುಪತ್ರ ವಿತರಣೆ

ಸರ್ಕಾರಿ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಹಕ್ಕುಪತ್ರ ವಿತರಣೆ

Spread the love

ದಾವಣಗೆರೆ : ಸಾರ್ವಜನಿಕ ಸಮಸ್ಯೆಗೆ ಸ್ಪಂಧಿಸಿರುವ ಅಭಿವೃದ್ದಿಗೆ ಶ್ರಮಿಸಿದವರನ್ನು ಬೆಂಬಲಿಸಿ ಆರ್ಶಿವದಿಸಿ ಎಂದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೈರತಿ ಅವರು ಹೇಳಿದರು.

ಸಂತೆಬೆನ್ನೂರಿನಲ್ಲಿ ಶನಿವಾರ ಜಿಲ್ಲಾಡಳಿತದಿಂದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಅಂಗವಾಗಿ ಆಯೋಜಿಸಲಾದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಕುಂದುಕೊರತೆ ಅಲಿಸಿ ಮಾತಾನಾಡಿದರು.

ಜನಸ್ಪಂದನ ಕಾರ್ಯಕ್ರಮ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಕಾರ್ಯಕ್ರಮ ಕಚೇರಿ ಕೆಲಸಗಳಿಗಾಗಿ ಜನರು ಅಲೆಯುವುದನ್ನು ತಪ್ಪಿಸಲು ನಮ್ಮ ಸರ್ಕಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ರೂಪಿಸಿದೆ. ಮೂಲ ಸೌಲಭ್ಯ ವಂಚಿತರಾದ ಜನರ ಮನೆಬಾಗಿಲಿಗೆ ಅಧಿಕಾರಿಗಳು ತೆರಳಿ ಸರ್ಕಾರದ ಯೋಜನೆಗಳ ಮಾಹಿತಿ ಹಾಗೂ ಸೌಲಭ್ಯ ಕಲ್ಪಿಸುವ ಈ ಕಾರ್ಯಕ್ರಮದ ಸದುಪಯೋಗವನ್ನು ಸಾರ್ವಜನಿಕರು ಪಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡರು

ರೂ.433 ಕೋಟಿ: ಇಂದು ನಡೆಯುತ್ತಿರುವ ಜನಸ್ಪಂದನ ಕಾರ್ಯಕ್ರಮ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಸಂತೆಬೆನ್ನೂರು ವ್ಯಾಪ್ತಿಯ 14 ಗ್ರಾಮ ಪಂಚಾಯಿತಿಗಳ ಜನರು ಭಾಗವಹಿಸಿದ್ದಾರೆ ಈ ವ್ಯಾಪ್ತಿಯಲ್ಲಿ ಇಲ್ಲಿನ ಶಾಸಕರು ರಸ್ತೆ ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಕಲ್ಪಿಸಲು ರೂ 433 ಕೋಟಿಗಳ ಅನುದಾನ ತಂದು ಅಭಿವೃದ್ದಿ ಕಾರ್ಯಕೈಗೊಂಡಿದ್ದಾರೆ. ರೂ.5.14 ಕೋಟಿ ವೆಚ್ಚದಲ್ಲಿ 47 ಶಾಲೆಗಳ ಅಭಿವೃದ್ದಿ ಕಾಮಗಾರಿ ಕೈಗೊಂಡಿದ್ದಾರೆ 40 ಸ್ತ್ರೀ ಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡಿದ್ದಾರೆ. ವಿವಿಧ ಸಾಮಾಜಿಕ ಭದ್ರತೆ ಯೋಜನೆ 310 ಫಲಾನುಭವಿಗಳನ್ನು ಗುರಿತಿಸಲಾಗಿದೆ. 48 ಗ್ರಾಮಗಳಲ್ಲಿ ಸ್ಮಶಾನ ಭೂಮಿ ಕಾಯ್ದಿರಿಸಲಾಗಿದೆ. ಭೂನ್ಯಾಯಮಂಡಳಿ ಹಕ್ಕುಪತ್ರ ಪೌತಿಖಾತೆಯ 361 ಪ್ರಕರಣಗಳನ್ನು ಇತ್ಯರ್ಥ ಪಡಿಸಿದ್ದಾರೆ. ಆನರ ಕೆಲಸವನ್ನು ಪ್ರಮಾಣಿಕವಾಗಿ ಮಾಡಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಕಾರ್ಯ ಶ್ಲಾಘನೀಯ ಎಂದರು.

ಸಂಸದರಾದ ಜಿ.ಎಂ ಸಿದ್ದೇಶ್ವರ ಅವರು ಮಾತಾನಾಡಿ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಹಾಗೂ ಜನರ ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಕೇಂದ್ರದ ಹಾಗೂ ರಾಜ್ಯ ಸರ್ಕಾರಗಳು ಅಧ್ಯತೆ ನೀಡಿದೆ ಎಂದರು. ಜಿಲ್ಲೆಯ ಸ್ವಸಹಾಯ ಸಂಘಗಳಿಗೆ ಅರ್ಥಿಕ ಬಲನೀಡಲು ಸ್ತ್ರಿಶಕ್ತಿ ಸಂಘಗಳು ಉತ್ಪಾದಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ನೀಡಲು ಒತ್ತು ನೀಡಬೇಕು ಇದಕ್ಕೆ ಬೇಕಾದ ಅನುದಾನವನ್ನು ಒದಗಿಸಲಾಗುವುದು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತಾನಾಡಿದ ಶಾಸಕರಾದ ಮಾಡಳ್ ವಿರುಪಾಕ್ಷಪ್ಪ ಅವರು ಕ್ಷೇತ್ರದಲ್ಲಿ ಬಗರ್ ಹುಕುಂ ಜಮೀನು ಸಾಗುವಳಿ ಮಾಡುತ್ತಿರುವ ಯಾರನ್ನು ಒಕ್ಕಲು ಎಬ್ಬಿಸಲು ಸರ್ಕಾರ ಬೀಡುವುದಿಲ್ಲ. ಸರ್ಕಾರಿ ಭೂಮಿ ಉಳಿಮೆ ಮಾಡುತ್ತಿರುವ ಅರ್ಹರಿಗೆ ಹಕ್ಕು ಪತ್ರ ನೀಡಲಾಗುವುದು. ಈಗಾಗಲೇ 4200 ಬಗರ್ ಹುಕುಂ ಸಾಗುವಳಿದಾರರನ್ನು ಗುರುತಿಸಿ ಸರ್ವೆ ಸ್ಕೆಚ್ ಮಾಡಿಸಲಾಗಿದೆ. ಶೀಘ್ರವೇ ಹಕ್ಕುಪತ್ರ ವಿತರಿಸಲಾಗುವುದು ಎಂದರು

ವಿಶೇಷ ಘಟಕ ಹಾಗೂ ಬುಡಕಟ್ಟು ಉಪಯೋಜನೆಯಡಿ ಎಸ್‍ಸಿ/ಎಸ್‍ಟಿ ಕಾಲೋನಿಯಲ್ಲಿ ರಸ್ತೆ ಕಾಮಗಾರಿ ನಡೆಸುವ ಯೋಜನೆ ಬದಲಾಯಿಸಿ ಈ ಅನುದಾನದಲ್ಲಿ ಗಂಗಾ ಕಲ್ಯಾಣ ಯೋಜನೆ ಹಾಗೂ ಆರ್ಥಿಕ ಸಬಲೀಕರಣದ ಯೋಜನೆಗೆ ಬಳಕೆಮಾಡಲು ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ಬರುವ ಫೆಬ್ರವರಿ ಮಾಹೆಯಲ್ಲಿ ಮಂಡನೆಯಾಗುವ ಬಜೆಟ್ ನಲ್ಲಿ ಈ ಯೋಜನೆ ಘೋಷಿಸಲಾಗುವುದು ಎಂದರು.

ಕ್ಷೇತ್ರದಲ್ಲಿ 2400 ಮನೆಗಳನ್ನು ಮಂಜೂರು ಮಾಡಿಸಲಾಗಿದೆ ಪರಿಶಿಷ್ಟ ಜಾತಿ ಹಾಗೂ ವರ್ಗದವರಿಗೆ ತಲಾ ರೂ.2 ಲಕ್ಷ ಇತರರಿಗೆ ರೂ.1.75 ಲಕ್ಷ ಅನುದಾನ ನೀಡಲಾಗುವುದು. ಅರ್ಹರು ಮನೆಗೆ ಬೇಡಿಕೆ ಸಲ್ಲಿಸಿದರೆ ತಕ್ಷಣವೇ ಮಂಜೂರು ಮಾಡಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿ.ಪಂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ. ಎ.ಚೆನ್ನಪ್ಪ, ಪೊಲೀಸ್ ವರಿಷ್ಠಾಧಿಕಾರಿ ಸಿ..ಬಿ ರಿಷ್ಯಂತ್ ಮಾತಾನಾಡಿದರು.

113 ಅರ್ಜಿ ಸ್ವೀಕಾರ: ಇಂದಿನ ಜನಸಂಪರ್ಕ ಸಭೆಯಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದಂತೆ 113 ಅರ್ಜಿಗಳನ್ನು ಸ್ವೀಕರಿಸಲಾಯಿತು. ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗರ್ಭಿಣಿಯರಿಗೆ ಶ್ರೀಮಂತ ನೆರವೇರಿಸಲಾಯಿತು. ವಿವಿಧ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು. ಆರೋಗ್ಯ ತಪಾಸಣೆ, ಸಾರ್ವಜನಿಕರ ಮಾಹಿತಿಗಾಗಿ ವಿವಿಧ ಇಲಾಖೆಯ ಮಳಿಗೆಗಳು ಸ್ಥಾಪಿಸಿ ಜನರಿಗೆ ಮಾಹಿತಿ ನೀಡಲಾಯಿತು.

ಸಮಾರಂಭದಲ್ಲಿ ಹೊನ್ನಾಳಿ ಉಪವಿಭಾಗಾಧಿಕಾರಿ ಹುಲ್ಲುಮನಿ ತಿಪ್ಪಣ್ಣ, ದಾವಣಗೆರೆ ವಿವಿ ಸಿಂಡಿಕೇಟ್ ಸದಸ್ಯ ಮಾಡಾಳ್ ಮಲ್ಲಿಕಾರ್ಜುನ, ವಿವಿಧ ಗ್ರಾ.ಪಂ ಗಳ ಅಧ್ಯಕ್ಷರಾದ ಶ್ರೀಮತಿ.ಶಿಲ್ಪ ಮರುಳಸಿದ್ದಪ್ಪ, ಶ್ರೀಮತಿ ಪ್ರೇಮಾಚಂದ್ರಪ್ಪ, ಬಿ.ಜಿ ಶಂಕರಪ್ಪ, ಶಶಿಕುಮಾರ್, ಮಂಜುನಾಥ್ , ಶ್ರೀಮತಿ ಪದ್ಮಾವತಿ, ಮಂಜಪ್ಪ, ಶ್ರೀಮತಿತುಂಗಮ್ಮ, ತಿಪ್ಪೇಶ್, ಶಂಕರನಾಯಕ, ಶ್ರೀಮತಿಜ್ಯೋತಿ, ಶ್ರೀಮತಿ ದ್ರಾಕ್ಷಯಿಣಮ್ಮ , ಶ್ರೀಮತಿ ರೇಣುಕಾ, ಶ್ರೀಮತಿ ಅಂಜಿನಮ್ಮ, ಶ್ರೀಮತಿ ಭಾಗ್ಯಮ್ಮ ಇತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸಿದ್ಧು ಜನ್ಮದಿನ ಆಚರಣೆಗೆ ದೇವನಗರಿ ಸಜ್ಜು

Spread the love ದಾವಣಗೆರೆ: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನದ ಪ್ರಯುಕ್ತ ಆ.3ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ