ಕಾಮಿಡಿ ನಟಿ ನಯನಾ ವಿರುದ್ಧ ಕೇಸ್ ದಾಖಲಾಗಿದೆ. ಜೀವ ಬೆದರಿಕೆ ಮತ್ತು ನಿಂದನೆ ಆರೋಪದಲ್ಲಿ ಕೇಸ್ ದಾಖಲಾಗಿದೆ. ಹಣದ ಹಂಚಿಕೆ ವಿಚಾರಕ್ಕೆ ನಯನಾ ಅವರು ಮತ್ತೊಬ್ಬ ಕಾಮಿಡಿ ನಟ ಸೋಮಶೇಖರ್‌ಗೆ ಬೆದರಿಕೆ ಹಾಕಿದ್ದಾರೆ (Crime news) ಎಂದು ಆರೋಪಿಸಲಾಗಿದೆ.
ಸೋಮಶೇಖರ್ ರಿಂದ ದೂರು ದಾಖಲಾಗಿದೆ. ಕಾಮಿಡಿ ಕಿಲಾಡಿ ಗ್ಯಾಂಗ್ಸ್ ನಲ್ಲಿ ಸೋಮಶೇಖರ್ ತಂಡ ಭಾಗವಹಿಸಿತ್ತು. ಖಾಸಗಿ ಚಾನಲ್ ನಲ್ಲಿ ಕಾರ್ಯಕ್ರಮ ಪ್ರಸಾರವಾಗಿತ್ತು. ಕಾರ್ಯಕ್ರಮದಲ್ಲಿ ಬಹುಮಾನದ ಹಣವಾಗಿ 3 ಲಕ್ಷ ಹಣ ಬಂದಿತ್ತು.
ಅದರಲ್ಲಿ ಒಬ್ಬೊಬ್ಬರಿಗೂ 70 ಸಾವಿರ ರೂ. ಒಬ್ಬೊಬ್ಬರಿಗೆ ಬಂದಿತ್ತು. ಅನೀಶ್ ಮತ್ತು ಚಿದಾನಂದ್ ತಂಡದ ಸೀನಿಯರ್ ಗಳಾಗಿದ್ದರು. ಇಬ್ಬರು ಸೀನಿಯರ್ ಗಳಿಗೆ ಹಣ ನೀಡಲು ನಯನಾ ಅವಾಚ್ಯ ಶಬ್ದಗಳಿಂದ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ. ಆರ್. ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7