Breaking News

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟಕ್ಕೆ ಶಾರೀಕ್ ಕಾರಣ ಎಂದ ಪೊಲೀಸರು

Spread the love

ಮಂಗಳೂರು: ನಗರದ ಗರೋಡಿಯಲ್ಲಿ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸಾಗಿಸುತ್ತಿದ್ದಾಗ ನಡೆದ ಸ್ಪೋಟದಲ್ಲಿ ಗಾಯಗೊಂಡು ನಗರದ ಫಾದರ್ ಮಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ ಶಾರೀಕ್ ಎಂಬುದನ್ನು ಆತನ ಕುಟುಂಬದವರು ಖಚಿತ ಪಡಿಸಿದ್ದಾರೆ ಎಂದು ಹೇಳಿ ಅಲೋಕ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.

 

ನಗರದಲ್ಲಿ ಬಾಂಬ್ ಸ್ಪೋಟ ನಡೆಸುವ ಉದ್ದೇಶದಿಂದ ಕುಕ್ಕರ್ ಬಾಂಬ್ ಸಾಗಿಸಿದ್ದ. ಮೈಸೂರಿನಲ್ಲಿ ಬಾಂಬ್ ತಯಾರಿಸಿ ತಂದಿದ್ದ. ನ.10ರಂದು ಮಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೈಸೂರಿಗೆ ಮರಳಿದ್ದ ಎಂದು ತಿಳಿಸಿದರು.

,’ಆರೋಪಿ ಶಾರಿಕ್ ಗೆ ಬಾಂಬು ತಯಾರಿ ಬಗ್ಗೆ ಭಾರಿ ಪರಿಣತಿ ಇದ್ದಂತೆ ತೋರುತ್ತಿಲ್ಲ. ಹಾಗಾಗಿ ಅದನ್ನು ಪೂರ್ವ ತಯಾರಿ ನಡೆಸಿದಂತೆ ಸ್ಫೋಟಗೊಳಿಸಲು ಸಾಧ್ಯವಾಗಿಲ್ಲ.ಕುಕ್ಕರ್ ಬಾಂಬನ್ನು ಸಾಗಿಸುತ್ತಿದ್ದಾಗಲೇ ಅದು ಸ್ಪೋಟಗೊಂಡಿದ್ದರಿಂದ ಬಾರಿ ಅನಾಹುತ ತಪ್ಪಿದೆ.’ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ