Breaking News
Home / ರಾಜಕೀಯ / ಯು.ಬಿ.ಬಣಕಾರ್ ಸೇರಿ ಹಲವು ನಾಯಕರು ಕಾಂಗ್ರೆಸ್ ಸೇರ್ಪಡೆ

ಯು.ಬಿ.ಬಣಕಾರ್ ಸೇರಿ ಹಲವು ನಾಯಕರು ಕಾಂಗ್ರೆಸ್ ಸೇರ್ಪಡೆ

Spread the love

ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಈ ರಾಜ್ಯ ನಾಶ ಆಗುತ್ತದೆ. ಸರ್ವನಾಶ ಆಗುತ್ತದೆ. ಹೀಗಾಗಿ ಬಿಜೆಪಿ ಪಕ್ಷವನ್ನು ಮುಂದಿನ ಚುನಾವಣೆಯಲ್ಲಿ ನಾವೆಲ್ಲರೂ ಸೇರಿಕೊಂಡು ಸೋಲಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕರೆ ನೀಡಿದರು.

2023ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಆರಂಭವಾಗಿದೆ. ಸೋಮವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಹಿರಿಯ ನಾಯಕ ಯು.ಬಿ.ಬಣಕಾರ್ ತಮ್ಮ ಬೆಂಬಲಿಗರಾದ ಮಂಜಣ್ಣ, ಶಿವರಾಜ್, ಹೇಮಣ್ಣ, ಷಣ್ಮುಖಯ್ಯ ಮಳಿಮಠ ಸೇರಿದಂತೆ ಹಲವರೊಂದಿಗೆ ಕಾಂಗ್ರೆಸ್‍ಗೆ ಸೇರ್ಪಡೆಯಾದರು ಇವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಶಾಲು ಹೊದಿಸಿ, ಧ್ವಜ ನೀಡಿ ಬರಮಾಡಿಕೊಂಡರು.

ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಸಿದ್ಧಾಂತ, ನಾಯಕರನ್ನು ಒಪ್ಪಿ ಬಿಜೆಪಿ, ಜೆಡಿಎಸ್ ಬಿಟ್ಟು ಸೇರಿದ್ದಾರೆ. ಯು.ಬಿ.ಬಣಕಾರ್ ಅವರು ಬಹಳಷ್ಟು ವರ್ಷಗಳ ಕಾಲ ಬಿಜೆಪಿಯಲ್ಲಿದ್ದವರು. ಆದರೆ ಇತ್ತಿಚಿಗೆ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದ ಬೇಸತ್ತು, ಯಾವುದೇ ಷರತ್ತು ಇಲ್ಲದೇ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಅದೇ ರೀತಿ ಹಲವು ನಾಯಕರು ಕೂಡ ಬಿಜೆಪಿಗೆ ಸೇರುತ್ತಿದ್ದಾರೆ. ಎಲ್ಲರಿಗೂ ಕೂಡ ಶುಭವಾಗಲಿ ಎಂದು ಹಾರೈಸಿದರು.

ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅನೈತಿಕ ದಾರಿಯಿಂದ ಅಧಿಕಾರಕ್ಕೆ ಬಂದಿದೆ. ನೈತಿಕ ದಾರಿಯಿಂದ ಇವರು ಅಧಿಕಾರಕ್ಕೆ ಬಂದಿಲ್ಲ. ಜನರ ಆಶೀರ್ವಾದ ಪಡೆದುಕೊಂಡು ಬಂದವರಲ್ಲ. ಆಪರೇಶನ ಕಮಲದ ಮೂಲಕ ಅಧಿಕಾರಕ್ಕೆ ಬಂದಿದ್ದಾರೆ. ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಎಂಎಲ್‍ಗಳನ್ನು ಖರೀದಿ ಮಾಡಿಕೊಂಡು ಅಧಿಕಾರಕ್ಕೆ ಬಂದಿದ್ದಾರೆ. ಮೂರೂವರೇ ವರ್ಷದಲ್ಲಿ ಬರೀ ಲೂಟಿ ಹೊಡೆಯೋದು, ಸುಳ್ಳು ಹೇಳುವುದು ಬಿಟ್ಟು ಏನೂ ಮಾಡಿಲ್ಲ. ಇದು 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಇಡೀ ನಾಡಿನ ಜನ ಮಾತನಾಡುತ್ತಿದ್ದಾರೆ. ಯಾವುದೇ ಕೆಲಸ ದುಡ್ಡಿಲ್ಲದೇ ಆಗುವುದಿಲ್ಲ. ವರ್ಗಾವಣೆ, ನೇಮಕಾತಿ ದುಡ್ಡು ಇಲ್ಲದೇ ಆಗುವುದಿಲ್ಲ. ಮುಖ್ಯಮಂತ್ರಿ ಆದಿಯಾಗಿ ಎಲ್ಲ ಮಂತ್ರಿಗಳು ಲೂಟಿ ಹೊಡೆಯಲು ನಿಂತಿದ್ದಾರೆ. ರಾಜ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.


Spread the love

About Laxminews 24x7

Check Also

ಬಂಗಾರ ದರ ಮತ್ತೆ ಇಳಿಕೆ

Spread the love 26: ಬಂಗಾರ ದರ ನಿನ್ನೆಗೆ ಅಂದರೆ ಜೂನ್‌ 25ಕ್ಕೆ ಹೋಲಿಕೆ ಮಾಡಿದರೆ ಇಂದು (ಜೂನ್‌ 24) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ