Breaking News
Home / ಜಿಲ್ಲೆ / ಬೆಳಗಾವಿ / ಉಗ್ರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು,ರಾಜ್ಯದಲ್ಲಿಯೂ ಕಠಿಣ ಕ್ರಮ : ಅಭಯ್ ಪಾಟೀಲ

ಉಗ್ರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು,ರಾಜ್ಯದಲ್ಲಿಯೂ ಕಠಿಣ ಕ್ರಮ : ಅಭಯ್ ಪಾಟೀಲ

Spread the love

ಉಗ್ರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು ತಂದು ತೀವ್ರತರವಾದ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೇ ಯುಪಿ ಮಾದರಿಯಲ್ಲಿ ರಾಜ್ಯದಲ್ಲಿಯೂ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಆಗ್ರಹಿಸಿದರು.

ಮಂಗಳವಾರ ಬೆಳಗಾವಿಯ ಖಾಸಗಿ ಹೋಟೆಲ್‍ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕ ಅಭಯ್ ಪಾಟೀಲ್ ರಾಜ್ಯ ಮತ್ತು ದೇಶ ವಿರೋಧಿ ಕೃತ್ಯದಲ್ಲಿ ತೊಡಗಿದ ಜನರ ವಿರುದ್ಧ ಉಗ್ರ ಕ್ರಮ ಆಗಬೇಕು ಎಂದು ನಾವು ಮೊದಲಿನಿಂದ ಒತ್ತಾಯಿಸುತ್ತಿದ್ದೇವೆ.

ಈ ಬಾಂಬ್ ಬ್ಲಾಸ್ಟ, ಪಾಕಿಸ್ತಾನ ಪರವಾಗಿ ಘೋಷಣೆ ಕೂಗುವವರಿಗೆ ಶಿಕ್ಷೆ ಆಗಬೇಕು ಎಂದರೆ ಉಗ್ರ ಕ್ರಮ ಆಗಬೇಕು. ಉತ್ತರಪ್ರದೇಶ ಮಾದರಿಯಲ್ಲಿ ಕರ್ನಾಟಕದಲ್ಲಿ ಕ್ರಮ ಆದರೆ ಮಾತ್ರ ಇಂತಹ ಸಂಘಟನೆಗಳು ಹಾದಿಗೆ ಬರುತ್ತವೆ. ಈ ಬಗ್ಗೆ ವಿಶೇಷ ಕಾಯ್ದೆ ಜಾರಿಗೆ ತರಬೇಕು. ಉತ್ತರಪ್ರದೇಶದಲ್ಲಿ ಆಸ್ತಿಮುಟ್ಟುಗೋಲು ಹಾಕಿ ಉಗ್ರ ಕ್ರಮ ಕೈಗೊಳ್ಳುತ್ತಿರುವುದನ್ನು ರಾಜ್ಯದಲ್ಲಿಯೂ ಜಾರಿಗೆ ತರಬೇಕು.

ಕೇವಲ ಅವರನ್ನು ಬಂಧಿಸಿ ಜೈಲಿಗೆ ಕಳಿಸುವುದು ಆಗಬಾರದು. ಕಾನೂನಿನಲ್ಲಿ ಬದಲಾವಣೆ ತಂದು ಅವರ ಬಗ್ಗೆ ಮರ್ಜಿ ಕಾಯಿದೆ ಎನ್‍ಕೌಂಟರ್ ಮಾಡಬೇಕು. ಉಗ್ರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಾನೂನಿನಲ್ಲಿ ಬದಲಾವಣೆ ತಂದು ಹೊಸ ಕಾನೂನು ತಂದು ತೀವ್ರತರವಾದ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನು ಉತ್ತರಪ್ರದೇಶ ಮತ್ತು ಕರ್ನಾಟಕದಲ್ಲಿ ನಿಮ್ಮದೇ ಸರ್ಕಾರ ಅಧಿಕಾರದಲ್ಲಿದೆ. ಉತ್ತರಪ್ರದೇಶದಲ್ಲಿ ಆಗುತ್ತಿರುವುದು ಯಾಕೆ ಕರ್ನಾಟಕದಲ್ಲಿ ಆಗುತ್ತಿಲ್ಲ ಎಂಬ ಮಾಧ್ಯಮಗಳ ಪ್ರಶ್ನೆಗೆ ನಮ್ಮ ಮುಖ್ಯಮಂತ್ರಿಗಳು ಕೂಡ ಅನೇಕ ಕ್ರಮ ತೆಗೆದುಕೊಂಡಿದ್ದಾರೆ. ಆದರೆ ಯುಪಿ ಮಾದರಿಯ ಕ್ರಮ ರಾಜ್ಯದಲ್ಲಿ ಆಗಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದರು.


Spread the love

About Laxminews 24x7

Check Also

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Spread the love ಕಾಸರಗೋಡು: ಕೇರಳದ ಕಾಸರ ಗೋಡು ಲೋಕಸಭೆ ಕ್ಷೇತ್ರದಲ್ಲಿ ನಡೆದ ಅಣಕು ಮತದಾನ ವೇಳೆ ಬಿಜೆಪಿ ಪರವಾಗಿ ಹೆಚ್ಚು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ