Breaking News

ಬಿಜೆಪಿಯ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ, ಕುಗ್ಗಲ್ಲ – ಸಿಬಿಐ ದಾಳಿಗೆ ಡಿ.ಕೆ ಸುರೇಶ್ ಪ್ರತಿಕ್ರಿಯೆ

Spread the love

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು ಎಂದು ಸಿಬಿಐ ದಾಳಿಗೆ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದ್ದಾರೆ.

ಡಿ.ಕೆ.ಸುರೇಶ್ ಟ್ವೀಟ್ ಮಾಡುವ ಮೂಲಕ ಸಿಬಿಐ ದಾಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. “ಇಂದು ಮುಂಜಾನೆಯ ವೇಳೆಗೆ ನಮ್ಮ ಮನೆಯ ಮೇಲೆ ಸಿಬಿಐ ದಾಳಿ ನಡೆದಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ ಸಿಕ್ಕಿದೆ. ಮುಂದೆಯೂ ಸಹ ಸಿಗಲಿದೆ” ಎಂದಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ಧರಿದ್ದೇವೆ. ಈ ವಿಚಾರದಲ್ಲಿ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅವಶ್ಯಕತೆ ಇಲ್ಲ ಎಂದು ಸುರೇಶ್ ಹೇಳಿದ್ದಾರೆ.

ಈ ಎಲ್ಲಾ ರಾಜಕೀಯ ಷಡ್ಯಂತ್ರಗಳನ್ನು ಎದುರಿಸಿ ಜಯಿಸಿ ಬರುವ ಶಕ್ತಿಯನ್ನು ಆ ದೇವರು ನಮಗೆ ಕರುಣಿಸಿದ್ದಾನೆ. ಹಾಗಾಗಿ ಅಭಿಮಾನಿಗಳು ವಿಚಲಿತರಾಗುವುದು ಬೇಡ. ನಿಮ್ಮ ಆಶೀರ್ವಾದ ಹಾರೈಕೆ ಸದಾ ಹೀಗೇ ಇರಲಿ ಎಂದರು.

ಸದಾಶಿವನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಇಂದು ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದರು. ಡಿಕೆಶಿ ಮನೆಯ ಮೇಲೆ ದಾಳಿ ಮಾಡುವಂತೆ ರಾಜ್ಯ ಸರ್ಕಾರ ಸಿಬಿಐ ಅಧಿಕಾರಿಗಳಿಗೆ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 8 ಗಂಟೆಗೆ ಸಿಬಿಐ ಅಧಿಕಾರಿಗಳು ಏಕಾಏಕಿ ದಾಳಿ ಮಾಡಿದ್ದು, ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

ಡಿಕೆಶಿಗೆ ಸೇರಿದ ಹಲವು ಕಡೆಗಳಲ್ಲಿ ಕೂಡ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಡಿಕೆಶಿ ಮನೆಯಲ್ಲಿ 50 ಲಕ್ಷ ಹಣ ಪತ್ತೆಯಾಗಿದ್ದು, ಅದನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಮನೆಯ ಮೇಲೂ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದು, ಅವರ ಮನೆಯಲ್ಲೂ ಶೋಧಕಾರ್ಯ ನಡೆಸಿದ್ದಾರೆ.


Spread the love

About Laxminews 24x7

Check Also

ರಾಯಣ್ಣನ ಸ್ವಗ್ರಾಮ ಸಂಗೋಳ್ಳಿಯಲ್ಲಿ ರಾಯಣ್ಣ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ಹೇಳಿದರು.

Spread the love ರಾಯಣ್ಣನ ಸ್ವಗ್ರಾಮ ಸಂಗೋಳ್ಳಿಯಲ್ಲಿ ರಾಯಣ್ಣ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ