Breaking News

ವಸತಿ ನಿಲಯದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

Spread the love

ವಸತಿ ನಿಲಯದಲ್ಲೇ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೈಲಹೊಂಗಲ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಹಾಸ್ಟೇಲ್‍ನಲ್ಲಿ ನಡೆದಿದೆ.

ಬೈಲಹೊಂಗಲ ತಾಲೂಕಿನ ಕೊಡ್ಡಿವಾಡ ಗ್ರಾಮದ ಪರುಶರಾಮ ಕೋನೇರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಬೇರೆ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ಬಳಿಕ ಈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇತ್ತ ವಿದ್ಯಾರ್ಥಿ ಬಾಗಿಲು ತೆರೆಯದ ಕಾರಣ ಇತರ ವಿದ್ಯಾರ್ಥಿಗಳು ಪೆÇಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬೈಲಹೊಂಗಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ