ರೈಲು ಡಿಕ್ಕಿ ಹೊಡೆದ ಪರಿಣಾಮ ಎರಡು ಆಕಳು ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.
ಹೌದು ಸೋಮವಾರ ರಾತ್ರಿ ಬೆಳಗಾವಿ ನಗರದ 3ನೇ ಮತ್ತು 4ನೇ ರೈಲ್ವೇ ಗೇಟ್ ಬಳಿ ಈ ಅವಘಡ ಸಂಭವಿಸಿದೆ. ರೈಲು ಗುದ್ದಿದ ಪರಿಣಾಮ ಆಕಳುಗಳು ಸಾವನ್ನಪ್ಪಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಳಿಕ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ
ಪಾಲಿಕೆ ಸ್ಯಾನಿಟರಿ ಇನ್ಸಪೆಕ್ಟರ್ ಗಣಾಚಾರಿ ಮತ್ತು ಅವರ ತಂಡ ಆಕಳುಗಳ ಶವಗಳನ್ನು ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ನಡೆಸಿದ್ದಾರೆ.
Laxmi News 24×7