ಬೆಂಗಳೂರು: ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಶಿಕ್ಷಕರ ಮಕ್ಕಳಿಗೆ ‘ಪ್ರತಿಭಾವಂತ ವಿದ್ಯಾರ್ಥಿ ವೇತನ’ ಮಂಜೂರು ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ವಿದ್ಯಾರ್ಥಿವೇತನ ನೀಡಲಾಗುತ್ತಿದೆ.
ಎಸ್ಸೆಸ್ಸೆಲ್ಸಿಯಿಂದ ಸ್ನಾತಕೋತ್ತರ ಪದವಿವರೆಗೆ ಅತಿ ಹೆಚ್ಚು ಅಂಕ ಪಡೆದಿರುವ ಶಿಕ್ಷಕರ, ಉಪನ್ಯಾಸಕರ/ಪ್ರಾಂಶುಪಾಲರ, ನಿವೃತ್ತ ಶಿಕ್ಷಕರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ.
2021-22ನೇ ಸಾಲಿನಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸಿಬಿಎಸ್ಇ/ ಐಸಿಎಸ್ಇ ವ್ಯಾಸಂಗ ಮಾಡುತ್ತಿರುವ ಮಕ್ಕಳು ಅರ್ಹರಾಗಿರುವುದಿಲ್ಲ. ಅರ್ಜಿಗಳನ್ನು ಶಿಕ್ಷಕರ ಕಲ್ಯಾಣ ನಿಧಿಯ ಜಾಲತಾಣ kstbfonline.karnataka.gov.in ಅಥವಾ
www.schooleducation.kar.nic.in ನಲ್ಲಿ ಆನ್ಲೈನ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 2023ರ ಜ.20 ಕೊನೇ ದಿನ.