Breaking News

ಲೈಂಗಿಕ ದೌರ್ಜನ್ಯ ಎಸಗಿದ್ದವನಿಗೆ 40 ವರ್ಷ ಕಠಿಣ ಶಿಕ್ಷೆ

Spread the love

ಮೈಸೂರು: ನಗರದಲ್ಲಿರುವ ಚಲನಚಿತ್ರ ನಟರೊಬ್ಬರ ಫಾರ್ಮ್​ಹೌಸ್​ನಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಬಿಹಾರ ಮೂಲದವನಿಗೆ ನಗರದ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶೈಮಾ ಖಮ್ರೋಜ್​ ಅವರು 40 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದ್ದಾರೆ.

 

ಬಿಹಾರ ಮೂಲದ ನಾಜೀಮ್​ ಶಿಕ್ಷೆಗೆ ಗುರಿಯಾದ ಅಪರಾಧಿ. ಶಿಕ್ಷೆ ಜತೆಗೆ 51 ಸಾವಿರ ರೂ. ದಂಡ ವಿಧಿಸಿದ್ದಾರೆ. ತಿ.ನರಸೀಪುರ ರಸ್ತೆಯ ಫಾರ್ಮ್​ಹೌಸ್​ನಲ್ಲಿ ನಾಜೀಮ್​ ಕುದುರೆಗಳಿಗೆ ಲಾಳ ಕಟ್ಟುವ ಕೆಲಸ ಮಾಡಿಕೊಂಡಿದ್ದ. ಕುಟುಂಬದೊಂದಿಗೆ ವಾಸವಿದ್ದ 10 ವರ್ಷದ ಅಪ್ರಾಪ್ತೆಗೆ 2021ರಲ್ಲಿ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ. ಅಲ್ಲದೇ ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಮತ್ತೆ ಅದೇ ಕೃತ್ಯವೆಸಗಲು ಮುಂದಾಗಿದ್ದಾಗ ಅಪ್ರಾಪ್ತೆ ಪಾಲಕರಿಗೆ ಕೈಗೆ ಸಿಕ್ಕಿ ಬಿದ್ದಿದ್ದ. ಈ ಬಗ್ಗೆ ನರಸೀಪುರ ಪೊಲೀಸ್​ ಠಾಣೆಗೆ ಪಾಲಕರು ದೂರು ನೀಡಿದ್ದರು. ಪೊಲೀಸರು ನಗರದ ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ದೋಷಾರೋಪಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಗೆ 40 ವರ್ಷ ಕಠಿಣ ಶಿಕ್ಷೆ, 51 ಸಾವಿರ ರೂ. ದಂಡ ವಿಧಿಸಿದ್ದಾರೆ. ಜತೆಗೆ ಅಪ್ರಾಪ್ತೆ ಸರ್ಕಾರದಿಂದ 7 ಲಕ್ಷ ರೂ. ಪರಿಹಾರ ಪಡೆಯಲು ಅರ್ಹಳು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಕೆ.ಬಿ.ಜಯಂತಿ ವಾದ ಮಂಡಿಸಿದ್ದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ