Breaking News

ಲೋಕಾಯುಕ್ತ ಬಲೆಗೆ ಬಿದ್ದ ಗೃಹರಕ್ಷಕ; ನಿವೃತ್ತ ಇನ್‌ಸ್ಪೆಕ್ಟರ್​​​ಗೆ ವೈದ್ಯಕೀಯ ವೆಚ್ಚ ಕೊಡಿಸಲು ಲಂಚ ಪಡೆಯುವಾಗ ಬಂಧನ

Spread the love

ಬೆಂಗಳೂರು: ನಿವೃತ್ತ ಇನ್‌ಸ್ಪೆಕ್ಟರ್ ಅವರ ವೈದ್ಯಕೀಯ ಬಿಲ್ ಕೊಡಿಸುವುದಾಗಿ ನಂಬಿಸಿ 20 ಸಾವಿರ ರೂ. ಲಂಚ ಪಡೆಯುತ್ತಿದ್ದ ಗೃಹ ರಕ್ಷಕನನ್ನು ಲೋಕಾಯುಕ್ತ ಪೊಲೀಸರು ರೆಡ್‌ಹ್ಯಾಂಡೆಡ್​ ಆಗಿ ಬಂಧಿಸಿದ್ದಾರೆ.

ಗೃಹ ಇಲಾಖೆ ಸಚಿವಾಲಯದಲ್ಲಿ ನಿಯೋಜಿತ ಗೃಹ ರಕ್ಷಕ ಸತೀಶ್ ಬಂಧಿತ.

ನಿವೃತ್ತ ಇನ್‌ಸ್ಪೆಕ್ಟರ್ ಪಿ.ಎನ್. ಗಣೇಶ್ ಅವರು ತಮ್ಮ ವೈದ್ಯಕೀಯ ವೆಚ್ಚದ ಮರುಪಾವತಿಗಾಗಿ ಗೃಹ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ವಿಷಯ ತಿಳಿದ ಗೃಹ ರಕ್ಷಕ ಸತೀಶ್, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಬಿಲ್ ಮೊತ್ತ ಕೊಡಿಸುವುದಾಗಿ ನಂಬಿಸಿ 20 ಸಾವಿರ ರೂಪಾಯಿ ಲಂಚ ನೀಡುವಂತೆ ಬೇಡಿಕೆ ಒಡ್ಡಿದ್ದ.

ಇದರಿಂದ ಬೇಸತ್ತ ನಿವೃತ್ತ ಇನ್‌ಸ್ಪೆಕ್ಟರ್, ಈ ಬಗ್ಗೆ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು. ಗಂಭೀರವಾಗಿ ಪರಿಗಣಿಸಿದ ಲೋಕಾಯುಕ್ತ ಪೊಲೀಸರು, ದೂರು ದಾಖಲಿಸಿಕೊಂಡು ಕಾರ್ಯಾಚರಣೆಗೆ ಇಳಿದಿದ್ದರು. ಮಂಗಳವಾರ ಗೃಹ ಇಲಾಖೆ ಕಚೇರಿಯಲ್ಲಿ ದೂರುದಾರ ಗಣೇಶ್ ಅವರಿಂದ 20 ಸಾವಿರ ರೂ. ಲಂಚ ಪಡೆಯುತ್ತಿದ್ದ ಸತೀಶ್‌ನನ್ನು ಸ್ಥಳದಲ್ಲಿಯೇ ಟ್ರ್ಯಾಪ್ ಮಾಡಿದ ಲೋಕಾಯುಕ್ತ ಪೊಲೀಸರು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ


Spread the love

About Laxminews 24x7

Check Also

ಜಂಬೂ ಸವಾರಿಗೆ ಪುಷ್ಪಾರ್ಚನೆ – ಪ್ರೋಟೋಕಾಲ್‌ನಲ್ಲಿ ಸಿಎಂ ಪತ್ನಿ ಹೆಸರು ಇರಲಿಲ್ಲ: ಸಚಿವ ಯತೀಂದ್ರ

Spread the loveಮೈಸೂರು: ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್  ಅವರು ಮೊದಲ ಬಾರಿಗೆ ಜಂಜೂಸವಾರಿಗೆ ಪುಷ್ಪಾರ್ಚನೆ ಮಾಡಿದ್ದು, ದಸರಾ  ಕೂಡ ಯಶಸ್ವಿಯಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ