ದತ್ತು ಮಕ್ಕಳು ಸಹ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ಪಡೆಯಲು ಅರ್ಹರು ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಂಗಳವಾರ ಮಹತ್ವದ ಆದೇಶ ನೀಡಿದೆ. ಬೆಂಗಳೂರು: ದತ್ತು ಮಕ್ಕಳು ಸಹ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ಪಡೆಯಲು ಅರ್ಹರು ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಂಗಳವಾರ ಮಹತ್ವದ ಆದೇಶ ನೀಡಿದೆ.
ದತ್ತು ಪುತ್ರ ಅನುಕಂಪದ ನೌಕರಿಗೆ ಅರ್ಹರಲ್ಲ ಎಂದು ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತೀರ್ಪು ಪ್ರಶ್ನಿಸಿ ಗಿರೀಶ್ ಎಂಬುವವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸೂರಜ್ ಗೋವಿಂದರಾಜ್, ನ್ಯಾ. ಜಿ, ಬಸವರಾಜ್ ಅವರಿದ್ದ ವಿಭಾಗೀಯ ಪೀಠ, ನೈಸರ್ಗಿಕ ಮಕ್ಕಳಿಗೂ ದತ್ತು ಮಕ್ಕಳಿಗೂ ಯಾವುದೇ ವ್ಯತ್ಯಾಸವಿಲ್ಲ. ವ್ಯತ್ಯಾಸ ಮಾಡಿದರೆ ದತ್ತು ತೆಗೆದುಕೊಳ್ಳುವ ಉದ್ದೇಶ ನಿರರ್ಥಕವಾಗಲಿದೆ ಎಂದು ಹೇಳಿದೆ.