Breaking News

ಕರ್ನಾಟಕ-ಭಾರತ್‌ ಗೌರವ್‌ ಕಾಶಿ ದರ್ಶನ ಮೂರನೇ ಟ್ರಿಪ್‌ ಜನವರಿಯಲ್ಲಿ: ಸಚಿವೆ ಜೊಲ್ಲೆ

Spread the love

ಬೆಂಗಳೂರು: ಕರ್ನಾಟಕ ಭಾರತ್‌ ಗೌರವ್‌ ಕಾಶಿ ದರ್ಶನ ರೈಲು ಪ್ರವಾಸಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ದೊರೆತಿದ್ದು, ಇಂದು ಎರಡನೇ ಟ್ರಿಪ್‌ನ ಯಾತ್ರಾರ್ಥಿಗಳಿಗೆ ಆತ್ಮೀಯವಾಗಿ ಬಿಳ್ಕೊಡುಗೆ ನೀಡಲಾಗಿದೆ. ಉತ್ತರ ಭಾರತದಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿರುವುದರಿಂದ ಡಿಸೆಂಬರ್‌ ತಿಂಗಳ ಬದಲಾಗಿ ಜನವರಿ ತಿಂಗಳಿನಲ್ಲಿ ಮುಂದಿನ ಟ್ರಿಪ್‌ಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಪ್‌ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

 

ಬುಧವಾರ ಬೆಂಗಳೂರಿನಲ್ಲಿ ಕರ್ನಾಟಕ ಭಾರತ್‌ ಗೌರವ್‌ ಕಾಶಿ ದರ್ಶನ ರೈಲು ಯಾತ್ರೆಯ ಪ್ರಥಮ ಟ್ರಿಪ್‌ನ ಪರಿಶೀಲನೆ ಸಭೆ ನಡೆಸಿ, ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಎರಡನೇ ಟ್ರಿಪ್‌ನ ಯಾತ್ರಾರ್ಥಿಗಳಿಗೆ ಆತ್ಮೀಯವಾಗಿ ಬಿಳ್ಕೊಡುಗೆ ನೀಡಿ ಮಾತನಾಡಿದರು.

ಜನವರಿ ತಿಂಗಳಲ್ಲಿ ಮೂರನೇ ಟ್ರಿಪ್‌
ಉತ್ತರ ಭಾರತದಲ್ಲಿ ಡಿಸೆಂಬರ್‌ ಮತ್ತು ಜನವರಿ ತಿಂಗಳ ಆರಂಭದಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿರುತ್ತದೆ. ಡಿಸೆಂಬರ್‌ 5 ರ ನಂತರ ಉಷ್ಣಾಂಶವು ರಾತ್ರಿಯ ಹೊತ್ತು 5 ಡಿಗ್ರಿ ಸೆಲ್ಸಿಯಸ್‌ ಗೆ ತಲುಪುತ್ತದೆ. ಇಷ್ಟು ತೀವ್ರ ಚಳಿಯನ್ನು ದಕ್ಷಿಣ ಭಾರತದ ಜನರು ತಡೆದುಕೊಳ್ಳುವುದು ಬಹಳ ಕಷ್ಟ. ಹಾಗೂ ಐಆರ್‌ಸಿಟಿಸಿ ಉತ್ತರ ಭಾರತದ ಕಡೆಯ ತನ್ನ ಎಲ್ಲಾ ಪ್ರವಾಸಿ ರೈಲುಗಳನ್ನ ದಕ್ಷಿಣ ಮತ್ತು ಪಶ್ಚಿಮ ಭಾರತದ ಕಡೆಗೆ ಮಾರ್ಪಾಡು ಮಾಡುತ್ತದೆ. ಈ ಹಿನ್ನಲೆಯಲ್ಲಿ ಕಾಶಿ ದರ್ಶನ ರೈಲನ್ನ ಡಿಸೆಂಬರ್‌ ಬದಲಾಗಿ ಜನವರಿ ತಿಂಗಳಲ್ಲಿ ಯೋಜಿಸುವಂತೆ ಐಆರ್‌ಸಿಟಿಸಿ ಅಧಿಕಾರಿಗಳು ಇಲಾಖೆಗೆ ಪತ್ರ ಬರೆದಿದ್ದಾರೆ. ನಮ್ಮ ಯಾತ್ರಾರ್ಥಿಗಳಲ್ಲಿ ಹೆಚ್ಚಿನ ಜನರು ಹಿರಿಯ ನಾಗರೀಕರಿದ್ದು, ಅವರ ಆರೋಗ್ಯದ ದೃಷ್ಟಿಯಿಂದ ಜನವರಿ ತಿಂಗಳ 20 ರ ನಂತರ 3 ನೇ ಟ್ರಿಪ್‌ ಆಯೋಜಿಸಲು ನಿರ್ಧಾರ ಕೈಗೊಳ್ಳಲಾಯಿತು ಎಂದು ತಿಳಿಸಿದರು.

ಶೇಕಡಾ 90 ರಷ್ಟು ಹಿರಿಯ ನಾಗರಿಕರು
ಕಾಶಿ ದರ್ಶನ ರೈಲು ಯಾತ್ರೆಯ ಎರಡೂ ಟ್ರಿಪ್‌ಗಳಲ್ಲಿ ಶೇಕಡಾ 90 ರಷ್ಟು ಹಿರಿಯ ನಾಗರಿಕರು ಪಾಲ್ಗೊಂಡಿದ್ದಾರೆ. ಹಲವಾರು ಕುಟುಂಬಗಳು ತಮ್ಮ ಪೋಷಕರನ್ನ ಈ ಕಾಶಿಯಾತ್ರೆಗೆ ಕಳುಹಿಸುತ್ತಿದ್ದಾರೆ. ಎಲ್ಲಾ ರೀತಿಯ ಸೌಲಭ್ಯಗಳನ್ನು ಒಳಗೊಂಡ ಈ ಯಾತ್ರೆಯ ಅನುಕೂಲವನ್ನು ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಡೆದುಕೊಳ್ಳುತ್ತಿರುವುದು ಸಂತಸದ ವಿಷಯ ಎಂದು ತಿಳಿಸಿದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ