Breaking News

ಮಹಾರಾಷ್ಟ್ರದ ಒಂದು ಹಳ್ಳಿಯನ್ನೂ ಕರ್ನಾಟಕಕ್ಕೆ ಬಿಟ್ಟುಕೊಡುವುದಿಲ್ಲ: ದೇವೇಂದ್ರ ಫಡ್ನವೀಸ್

Spread the love

ಮುಂಬೈ: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದದ ನಡುವೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕರ್ನಾಟಕದ ಮರಾಠಿ ಭಾಷಿಕ ಭಾಗಗಳನ್ನು ತಮ್ಮ ರಾಜ್ಯಕ್ಕೆ ಸೇರಿಸಲಾಗುವುದು ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಒಂದೇ ಒಂದು ಹಳ್ಳಿಯೂ ಕರ್ನಾಟಕಕ್ಕೆ ಹೋಗುವುದಿಲ್ಲ.

ಬದಲಾಗಿ ಬೆಳಗಾವಿ-ಕಾರವಾರ-ನಿಪ್ಪಾಣಿ ಸೇರಿದಂತೆ ಮರಾಠಿ ಭಾಷಿಕ ಗ್ರಾಮಗಳನ್ನೂ ನಮ್ಮ ರಾಜ್ಯಕ್ಕೆ ತರಲು ರಾಜ್ಯ ಸರ್ಕಾರ ಹೋರಾಟ ನಡೆಸಲಿದೆ ಎಂದರು.

 

ಕರ್ನಾಟಕದೊಂದಿಗಿನ ಗಡಿ ವಿವಾದದ ಬಗ್ಗೆ ಮುಂದುವರಿಯಲು ಸಿಎಂ ಏಕನಾಥ್ ಶಿಂಧೆ ಅವರು ಎರಡು ಸಚಿವರನ್ನು ನೇಮಿಸಿದ್ದರು. ಇದಕ್ಕೆ ಪ್ರತಿಯಾಗಿ ಕರ್ನಾಟಕವೂ ಮುಕುಲ್ ರೋಹ್ಟಗಿ ಸೇರಿದಂತೆ ವಕೀಲರ ತಂಡವನ್ನು ನೇಮಿಸಿದೆ.

ಈ ಮಧ್ಯೆ, ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಮಹಾರಾಷ್ಟ್ರ ಸಿಎಂ ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚಿಸುವ ಕೆಲಸವನ್ನು ಮಾಡಬಾರದು ಎಂದು ಗುಡುಗಿದ್ದಾರೆ. ಎರಡು ರಾಜ್ಯಗಳ ನಡುವೆ ಸೌಹಾರ್ದತೆ ಇರುವಾಗ, ಎಲ್ಲಾ ಭಾಷಿಕರನ್ನು ಒಂದೇ ರೀತಿಯಲ್ಲಿ ನೋಡಿಕೊಳ್ಳುವಾಗ, ಮಹಾರಾಷ್ಟ್ರದಲ್ಲಿ ದೊಡ್ಡ ಪ್ರಮಾಣ ದಲ್ಲಿ ಕನ್ನಡಿಗರು ಇರುವ ಅವರ ಹಿತರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಕಾಲುಜಾರಿ ನಾಲೆಗೆ ಬಿದ್ದ ಬಾಲಕಿ, ರಕ್ಷಣೆಗೆ ಹೋದ ನಾಲ್ವರು ಸೇರಿ ಐವರು ಮಕ್ಕಳು ನೀರುಪಾಲು

Spread the loveಮಂಡ್ಯ: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಮುಂದಾಗಿ, ಐವರು ಮಕ್ಕಳು ನೀರುಪಾಲಾದ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ