ನವದೆಹಲಿ: ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ(ಪಿಎಂಎಲ್‌ಎ) ಅಡಿ ಬರುವ ಅಪರಾಧಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ದೊಂದಿಗೆ ಹಂಚಿಕೊಳ್ಳುವಂತೆ ಮಿಲಿಟರಿ ಇಂಟೆಲಿಜೆನ್ಸ್ ಸೇರಿದಂತೆ 15ಕ್ಕೂ ಹೆಚ್ಚು ಇಲಾಖೆಗಳಿಗೆ ಕೇಂದ್ರ ಸರ್ಕಾರ ಆದೇಶಿಸಿದೆ.
ಹಣಕಾಸು ಸಚಿವಾಲಯದ ಅಧಿಸೂಚನೆಯ ಪ್ರಕಾರ, ರಾಷ್ಟ್ರೀಯ ತನಿಖಾ ಸಂಸ್ಥೆ, ಗಂಭೀರ ವಂಚನೆ ತನಿಖಾ ಕಚೇರಿ, ರಾಜ್ಯ ಪೊಲೀಸ್ ಇಲಾಖೆಗಳು, ವಿದೇಶಾಂಗ ಸಚಿವಾಲಯ, ಭಾರತೀಯ ಸ್ಪರ್ಧಾತ್ಮಕ ಆಯೋಗ, ವಿಶೇಷ ತನಿಖಾ ತಂಡ, ರಾಷ್ಟ್ರೀಯ ಗುಪ್ತಚರ ಗ್ರಿಡ್, ಕೇಂದ್ರ ವಿಚಕ್ಷಣ ಆಯೋಗ, ಡಿಫೆನ್ಸ್ ಇಂಟೆಲಿಜೆನ್ಸ್ ಏಜೆನ್ಸಿ ಮತ್ತಿತರ ಇಲಾಖೆಗಳು ಪಿಎಂಎಲ್‌ಎ ಪ್ರಕರಣಗಳ ಕುರಿತ ಮಾಹಿತಿಯನ್ನು ಇಡಿಯೊಂದಿಗೆ ಹಂಚಿಕೊಳ್ಳಬೇಕು.