ಸಾಲಬಾಧೆ ತಾಳಲಾರದೆ ಯುವಕನೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ತಾಲೂಕಿನ ಬಸರೀಕಟ್ಟಿ ಗ್ರಾಮದಲ್ಲಿ ನಡೆದಿದೆ
32 ವರ್ಷದ ಲಕ್ಷ್ಮಣ ದಿಲೀಪ ನಾಗರೋಳಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ದುರ್ದೈವಿ ಯುವಕ. ಮಂಗಳವಾರ ಬೆಳಿಗ್ಗೆ ಮನೆಯಿಂದ ಹೋದವನು ವಾಪಸ್ ಮನೆಗೆ ಬಂದಿರಲಿಲ್ಲ. ಇದರಿಂದ ತೀವ್ರ ಆತಂಕಿತರಾಗಿದ್ದ ಆತನ ಪತ್ನಿ ಮತ್ತು ತಾಯಿ ಕಳೆದ ಮೂರು ದಿನಗಳಿಂದ ಹುಡುಕಾಟ ನಡೆಸಿದ್ದರು. ಆದರೆ ಗುರುವಾರ ಅವರ ಜಮೀನಿನ ಬಾವಿಯಲ್ಲಿ ಈತನ ಶವ ಪತ್ತೆಯಾಗಿದೆ. ಸ್ಥಳಕ್ಕೆ ಮಾರಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕನ ಶವವನ್ನು ಹೊರಗೆ ತೆಗೆಯಲಾಗಿದೆ.
ಮೃತ ಯುವಕ ಪತ್ನಿ, ತಾಯಿ, ಓರ್ವ ಪುತ್ರ, ಇಬ್ಬರು ಪುತ್ರರಿದ್ದಾರೆ. ಈ ಸಂಬಂಧ ಮಾರಿಹಾಳ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮುಂದಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.