ಬೀದಿ ನಾಯಿ ಹಾವಳಿಗೆ ವಾಣಿಜ್ಯನಗರಿ ಹುಬ್ಬಳ್ಳಿಯ ಜನರು ಬೆಚ್ಚಿ ಬಿದ್ದಿದ್ದಾರೆ. ಹಾಡಹಗಲೇ ಸಾರ್ವಜನಿಕರ ಮೇಲೆ ದಾಳಿ ಮಾಡುತ್ತಿರುವ ಬೀದಿ ನಾಯಿಗಳ ಹಾವಳಿ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಹೌದು..ಹುಬ್ಬಳ್ಳಿ ನಗರದ ಸಾಕಷ್ಟು ಜನನಿಬಿಡ ಪ್ರದೇಶದಲ್ಲಿ ಒಂದಾಗಿರುವ ಕೊಪ್ಪಿಕರ ರಸ್ತೆಯಲ್ಲಿ ಇಬ್ಬರು ಯುವಕರ ಮೇಲೆ ಬೀದಿ ನಾಯಿ ಅಟ್ಯಾಕ್ ಮಾಡಿದ್ದು, ಬೀದಿ ನಾಯಿ ಅಟ್ಯಾಕ್ ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ನಿನ್ನೆ ಬೆಳಗಿನ ಜಾವ ಇಬ್ಬರು ಯುವಕರನ್ನು ಬೆನ್ನು ಹತ್ತಿ ಬೀದಿ ನಾಯಿ ಅಟ್ಯಾಕ್ ಮಾಡಿದ್ದು, ನಾಯಿಗೆ ಬೆಚ್ಚಿ ಬಿದ್ದ ಯವಕರು ತಪ್ಪಿಸಿಕೊಳ್ಳಲು ಯತ್ನಿಸಿದರೂ ಕೂಡ ಬೀದಿ ನಾಯಿ ಅಟ್ಯಾಕ್ ಮಾಡಿ ಕಚ್ಚಿದೆ. ನಾಯಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಯುವಕರು ಕೆಳಗೆ ಬಿದ್ದಿರುವ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.