Breaking News

ರಾಜ್ಯದ ಗಡಿ ಹಾಗೂ ಜನರನ್ನು ರಕ್ಷಿಸಲು ಶಕ್ತಿ ಮೀರಿ ಹೋರಾಟ: ಸಿಎಂ ಬೊಮ್ಮಾಯಿ

Spread the love

ಬೆಂಗಳೂರು: ನಮ್ಮ ಗಡಿ ಹಾಗೂ ಜನರನ್ನು ರಕ್ಷಿಸಲು ಶಕ್ತಿ ಮೀರಿ ಹೋರಾಟ ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ,ನ್ಯಾಯ ನಮ್ಮ ಕಡೆಯಿದೆ. ಎರಡೂ ರಾಜ್ಯಗಳ ಮಧ್ಯೆ ಶಾಂತಿ ಕಾಪಾಡಲು ಮಹಾರಾಷ್ಟ್ರ ಸರ್ಕಾರ ತುರ್ತಾಗಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಆಗ್ರಹಿಸಿದರು.

 

ಅಂತರವನ್ನು ಕಡಿಮೆ ಮಾಡಲು ಮಹಾರಾಷ್ಟ್ರ ಕ್ರಮ ವಹಿಸಬೇಕು
ಭಾರತ ರಾಜ್ಯಗಳ ಒಕ್ಕೂಟ. ಪ್ರತಿ ರಾಜ್ಯಕ್ಕೂ ತನ್ನದೇ ಆದ ಹಕ್ಕುಗಳಿವೆ. ರಾಜ್ಯಗಳನ್ನು ರಾಜ್ಯ ಮರುವಿಂಗಡನಾ ಕಾಯ್ದೆಯಡಿ ರಚಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಆಯಾ ರಾಜ್ಯಗಳ ಕರ್ತವ್ಯವಾಗಿದ್ದು, ರಾಜ್ಯಗಳ ನಡುವೆ ಶಾಂತಿ ಕಾಯ್ದುಕೊಳ್ಳಬೇಕಿದೆ. ಮಹಾರಾಷ್ಟ್ರ ಸರ್ಕಾರ ತಕ್ಷಣವೇ ಕ್ರಮಕೈಗೊಂಡು ರಾಜ್ಯಗಳ ನಡುವಿನ ಅಂತರವನ್ನು ಕಡಿಮೆಮಾಡಬೇಕು. ನಾವು ಕಾನೂನು ಪಾಲಿಸುವವ ರಾಗಿದ್ದು, ನಮ್ಮ ಹಕ್ಕುಗಳ ವ್ಯಾಪ್ತಿಯಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದೇವೆ. ಮಹಾರಾಷ್ಟ್ರ 2004 ರಲ್ಲಿ ಪ್ರಕರಣ ದಾಖಲಿಸಿತ್ತು. ನಾವು ನ್ಯಾಯಾಲಯದಲ್ಲಿ ಹೋರಾಡುತ್ತಿದ್ದೇವೆ ಎಂದರು.

ಕಾನೂನು ಹೋರಾಟಕ್ಕೆ ಆದ್ಯತೆ
ನಮ್ಮ ಮೊದಲ ಆದ್ಯತೆ ಕಾನೂನಾತ್ಮಕ ಹೋರಾಟ ಮಾಡುವುದಾಗಿದೆ. ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣವಿದ್ದಾಗ ಅದರ ತೀರ್ಪಿಗಾಗಿ ಕಾಯಬೇಕು. ಪ್ರಕರಣವು ಅದರ ಅರ್ಜಿಯ ಅರ್ಹತೆಯ ಮೇಲೆ ನಿಂತಿಲ್ಲ, ಬದಲಾಗಿ ಮೆಂಟೇನಬಿಲಿಟಿ ಆಧಾರದ ಮೇಲೆ ನಿಂತಿದೆ. ಕಲಂ 3 ಕೂಡ ಬಹಳ ಸ್ಪಷ್ಟವಾಗಿದೆ. ಸರ್ವೋಚ್ಚ ನ್ಯಾಯಾಲಯವು ಈ ಬಗ್ಗೆ ಒಂದು ನಿರ್ಣಯಕ್ಕೆ ಬರಬೇಕಿದೆ ಎಂದರು. ಮುಂದಿನ ವಾರದಲ್ಲಿ ಸರ್ವ ಪಕ್ಷ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು ಎಂದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ