Breaking News

ಮಹಾರಾಷ್ಟ್ರಕ್ಕೆ ಸೇರಿದ ಒಂದಿಂಚೂ ಜಾಗ ಕರ್ನಾಟಕ ಸೇರಲು ಬಿಡಲ್ಲ: ಸಿಎಂ ಶಿಂಧೆ

Spread the love

ಮುಂಬೈ: ಬೆಳಗಾವಿ ಗಡಿ ಕುರಿತಂತೆ ಮಹಾರಾಷ್ಟ್ರ, ಕರ್ನಾಟಕ ನಡುವೆ ಜಟಾಪಟಿ ನಡೆದಿರುವ ನಡುವೆಯೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಕಾರಣಕ್ಕೂ ಮಹಾರಾಷ್ಟ್ರಕ್ಕೆ ಸೇರಿರುವ ಪ್ರದೇಶದ ಒಂದಿಂಚು ಭೂಮಿಯನ್ನು ನೆರೆರಾಜ್ಯಕ್ಕೆ ಹೋಗಲು ಬಿಡುವುದಿಲ್ಲ ಎಂದು ಹೇಳುವ ಮೂಲಕ ಉಭಯ ರಾಜ್ಯಗಳ ನಡುವಿನ ಗಡಿ ವಿವಾದ ಉಲ್ಬಣಗೊಳ್ಳುವಂತಾಗಿದೆ.

 

 

ಸುದ್ದಿಗಾರರೊಂದಿಗೆ ಮಾತನಾಡಿದ ಶಿಂಧೆ, ನಾವು ಗಡಿಭಾಗದ ಮರಾಠಿ ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದೇವೆ. ಆ ನಿಟ್ಟಿನಲ್ಲಿ ಮಹಾರಾಷ್ಟ್ರದ ಒಂದಿಂಚು ಜಾಗವನ್ನು ಎಲ್ಲಿಗೂ ಹೋಗಲು ಬಿಡುವುದಿಲ್ಲ ಎಂದು ಹೇಳಿದರು.

ಗಡಿಭಾಗದಲ್ಲಿರುವ 40 ಗ್ರಾಮಗಳ ಸಮಸ್ಯೆಗಳನ್ನು ಪರಿಹರಿಸುವುದು ನಮ್ಮ ಸರ್ಕಾರ (ಮಹಾರಾಷ್ಟ್ರ)ದ ಹೊಣೆಗಾರಿಕೆಯಾಗಿದೆ ಎಂದು ಶಿಂಧೆ ತಿಳಿಸಿದ್ದಾರೆ. ಇದಕ್ಕೂ ಮುನ್ನ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ವಿರುದ್ಧ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಾಗ್ದಾಳಿ ನಡೆಸಿದ್ದರು.

ಬೊಮ್ಮಾಯಿಯವರು ಗಡಿ ವಿಚಾರದಲ್ಲಿ ಏಕಾಏಕಿ ಹೇಳಿಕೆ ನೀಡುವ ಮೂಲಕ ಮಹಾರಾಷ್ಟ್ರದ 40 ಗ್ರಾಮಗಳು ತಮ್ಮದೆಂದು ಹೇಳಿಕೊಂಡಿದ್ದಾರೆಯೇ ಎಂದು ಠಾಕ್ರೆ ಪ್ರಶ್ನಿಸಿದ್ದರು.


Spread the love

About Laxminews 24x7

Check Also

ಬಸವ‌ ಸಂಸ್ಕೃತಿ ಯಾತ್ರೆ ಹೆಸರಲ್ಲಿ ಸಮಾಜ ಒಡೆಯೋ ಕೆಲಸ ಮಾಡುತ್ತಿದ್ದಾರೆ

Spread the love ಬಸವ‌ ಸಂಸ್ಕೃತಿ ಯಾತ್ರೆ ಹೆಸರಲ್ಲಿ ಸಮಾಜ ಒಡೆಯೋ ಕೆಲಸ ಮಾಡುತ್ತಿದ್ದಾರೆ ಬಸವಣ್ಣನ ಹೆಸರಲ್ಲಿ ಕೆಲವರಿಂದ ಸಮಾಜ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ