Breaking News

ಮಹಾರಾಷ್ಟ್ರ ಗಡಿ ವಿಚಾರ ಮುಂದಿನ ವಾರ ಸರ್ವಪಕ್ಷ ಸಭೆ: ಸಿಎಂ

Spread the love

ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಇರುವ ಪ್ರಕರಣಗಳಲ್ಲಿ ರಾಜ್ಯಕ್ಕೆ ಗಟ್ಟಿಯಾದ ಕಾನೂನು ನೆಲೆಗಟ್ಟಿದೆ. ಈ ವಿಷಯದಲ್ಲಿ ನಾವು ಸ್ಪಷ್ಟವಾಗಿದ್ದೇವೆ. ಗಡಿ ವಿಚಾರವಾದ್ದರಿಂದ ಮುಂದಿನ ವಾರ ಸರ್ವಪಕ್ಷ ಸಭೆ ಕರೆದಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಗಡಿ ವಿಚಾರವಾದ್ದರಿಂದ ಮುಂದಿನ ವಾರ ಸರ್ವಪಕ್ಷ ಸಭೆ ಕರೆದಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ವಪಕ್ಷಗಳ ಸಭೆಯಲ್ಲಿ ಮತ್ತಷ್ಟು ಸಂಗತಿಗಳನ್ನು ಚರ್ಚಿಸಲಾಗುವುದು ಎಂದರು.

ಮಹಾರಾಷ್ಟ್ರದ ಕೆಲ ಗ್ರಾಮಗಳು ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಬಯಸಿದ್ದವು ಎಂದು ಹೇಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಮಾತನಾಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆಗೆ ಧೈರ್ಯ ಇಲ್ಲ.
– ಉದ್ಧವ್‌ ಠಾಕ್ರೆ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ

ಬೆಳಗಾವಿ, ನಿಪ್ಪಾಣಿ ಸೇರಿ ಕೆಲ ನಗರಗಳನ್ನು ಬಿಟ್ಟು ಕೊಡಲು ಕರ್ನಾಟಕ ಒಪ್ಪಿದರೆ, ಅದಕ್ಕೆ ಪ್ರತಿಯಾಗಿ ಕೆಲ ಪ್ರದೇಶಗಳನ್ನು ಬಿಟ್ಟು ಕೊಡುವ ಬಗ್ಗೆ ನಾವೂ(ಮಹಾರಾಷ್ಟ್ರ) ಯೋಚಿಸಬಹುದು.
– ಶರದ್‌ ಪವಾರ್‌, ಎನ್‌ಸಿಪಿ ವರಿಷ್ಠ


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ