ಮುಂಬಯಿ: ಠಾಕ್ರೆ ಗುಂಪಿನ ನಾಯಕ ಸಂಸದ ಸಂಜಯ್ ರಾವತ್ ಅವರು ಶುಕ್ರವಾರ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿಯಾದರು.
ಭೇಟಿಯ ಸಂದರ್ಭದಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತು ಚರ್ಚೆ ನಡೆಸಲಾಯಿತು. ಅಲ್ಲದೆ, ಉದ್ಧವ್ ಠಾಕ್ರೆ ನೀಡಿರುವ ಮಹಾರಾಷ್ಟ್ರ ಬಂದ್ ಕರೆಗೆ ಎನ್‌ಸಿಪಿ ಬೆಂಬಲ ಘೋಷಿಸಿದ್ದು, ಹಾಗಾಗಿ ರಾಜ್ಯಪಾಲರ ಹೇಳಿಕೆ ವಿವಾದ ಭುಗಿಲೇಳುವ ಸಾಧ್ಯತೆ ಇದೆ.
ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರ ವಿವಾದಾತ್ಮಕ ಹೇಳಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಮಹಾರಾಷ್ಟ್ರದಿಂದ ಅವರನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿದರು.
ರಾಜ್ಯಪಾಲರನ್ನು ಕೆಳಗಿಳಿಸದಿದ್ದರೆ ಮಹಾರಾಷ್ಟ್ರ ಬಂದ್ ಮಾಡುವುದಾಗಿ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಉದ್ಧವ್ ಠಾಕ್ರೆ ಅವರ ಪತ್ರಿಕಾಗೋಷ್ಠಿಯ ನಂತರ ಸಂಜಯ್ ರಾವತ್ ಎರಡನೇ ದಿನ ಶರದ್ ಪವಾರ್ ಅವರನ್ನು ಭೇಟಿಯಾದ ಬಳಿಕ ರಾಜಕೀಯ ವಲಯದಲ್ಲಿ ಚರ್ಚೆ ಶುರುವಾಗಿದೆ.