ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯ ಕೋಳೂರು ಬಸವನಗೌಡ (89) ಶುಕ್ರವಾರ ನಗರದ ತಮ್ಮ ಮನೆಯಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾದರು.
1999ರಿಂದ 2004ರವರೆಗೆ ಬಳ್ಳಾರಿ ಲೋಕಸಭಾ ಕ್ಷೇತ್ರವನ್ನು ಬಸವನ ಗೌಡ ಪ್ರತಿನಿಧಿಸಿದ್ದರು.
ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಅವರು ಆಯ್ಕೆಯಾಗಿದ್ದರು.
ಅವರಿಗೆ ಪತ್ನಿ ಕಾಮಾಕ್ಷಮ್ಮ, ವೀರ ಶೈವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಬಿ.ಟಿ. ಪಾಟೀಲ್ ಸೇರಿದಂತೆ ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ ವೀರಶೈವ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
1980ರಲ್ಲಿ ವೀರಶೈವ ಎಂಜಿನಿಯ ರಿಂಗ್ ಕಾಲೇಜು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.
Laxmi News 24×7