Breaking News

ಗಡಿಜಿಲ್ಲೆ ಕಲಬುರಗಿಯಲ್ಲಿ ಮಹಾರಾಷ್ಟ್ರ ಬಸ್‌ಗಳಿಗೆ ಮಸಿ ಬಳಿದು ಪ್ರತಿಭಟನೆ

Spread the love

(ಕಲಬುರಗಿ ಜಿಲ್ಲೆ): ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್‌ಗಳಿಗೆ ಮಸಿ ಬಳಿದಿರುವುದನ್ನು ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ತಾಲ್ಲೂಕಿನ ಬಳೂರ್ಗಿ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಹಾರಾಷ್ಟ್ರದ ಅಕ್ಕಲಕೋಟದಿಂದ ಅಫಜಲಪುರಕ್ಕೆ ಬರುತ್ತಿದ್ದ ಬಸ್‌ ತಡೆದು ಬಸ್‌ಗೆ ಮಸಿ ಬಳಿದು ಪ್ರತಿಭಟನೆ ನಡೆಸಿದರು.

 

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ಜಮಾದಾರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಪ್ರತಿಭಟನಾಕಾರರು, ‘ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು, ಹಿಡಿ ಮಣ್ಣು ಮಹಾರಾಷ್ಟ್ರಕ್ಕೆ ನೀಡುವುದಿಲ್ಲ. ಸೋಲಾಪುರ, ಅಕ್ಕಲಕೋಟ, ಜತ್ತ ಈ ನಗರಗಳು ಕರ್ನಾಟಕಕ್ಕೆ ಸೇರಿದ್ದು, ನಾವು ಎಂದಿಗೂ ಬಿಡುವುದಿಲ್ಲ ಪಡೆದೇ ತೀರುತ್ತೇವೆ. ಯಾವುದೇ ಕಾಲಕ್ಕೂ ಬೆಳಗಾವಿ ಜಿಲ್ಲೆಯನ್ನು ಬಿಟ್ಟು ಕೊಡುವುದಿಲ್ಲ’ ಎಂದು ತಿಳಿಸಿದರು.


Spread the love

About Laxminews 24x7

Check Also

ಕಾಲುಜಾರಿ ನಾಲೆಗೆ ಬಿದ್ದ ಬಾಲಕಿ, ರಕ್ಷಣೆಗೆ ಹೋದ ನಾಲ್ವರು ಸೇರಿ ಐವರು ಮಕ್ಕಳು ನೀರುಪಾಲು

Spread the loveಮಂಡ್ಯ: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಮುಂದಾಗಿ, ಐವರು ಮಕ್ಕಳು ನೀರುಪಾಲಾದ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ