Breaking News

ವಿಧಾನಸಭೆಯ ಹುದ್ದೆಗಳ ಭರ್ತಿಗೆ ಡಿ.5ರಿಂದ ಪರೀಕ್ಷೆ

Spread the love

ಬೆಂಗಳೂರು: ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್, ಕಿರಿಯ ಸಹಾಯಕ, ಸ್ವಾಗತಗಾರರು ಹಾಗೂ ದಲಾಯತ್ ಹುದ್ದೆಗಳಿಗೆ ಡಿ.5ರಿಂದ 7ರವರೆಗೆ ಪರೀಕ್ಷೆಗಳು ನಡೆಯಲಿವೆ.

ಡಿ.5ರಂದು ಮಧ್ಯಾಹ್ನ 3.30ರಿಂದ 4.30ರವರೆಗೆ ದಲಾಯತ್ ಹುದ್ದೆಗೆ, 50 ಅಂಕಗಳ ಬಹು ಆಯ್ಕೆ ಮಾದರಿಯ ಪರೀಕ್ಷೆ ನಡೆಯಲಿದೆ.

 

ಕಂಪ್ಯೂಟರ್‌ ಆಪರೇಟರ್ ಹುದ್ದೆಗಳಿಗೆ (100 ಅಂಕಗಳು) 6ರಂದು ಮಧ್ಯಾಹ್ನ 3ರಿಂದ 5ರವರೆಗೆ, ಕಿರಿಯ ಸಹಾಯಕ ಹಾಗೂ ಸ್ವಾಗತಗಾರರ ಹುದ್ದೆಗಳಿಗೆ (100 ಅಂಕಗಳು) 7ರಂದು ಮಧ್ಯಾಹ್ನ 3ರಿಂದ 5ರವರೆಗೆ ಪರೀಕ್ಷೆಗಳು ನಡೆಯಲಿವೆ.

ಅಭ್ಯರ್ಥಿಗಳು ಡಿ.1ರ ಮಧ್ಯಾಹ್ನದ ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ https://kea.kar.nic.in ನಲ್ಲಿ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಂಡು, ನಿಗದಿತ ಕೇಂದ್ರಗಳಲ್ಲಿ ಪರೀಕ್ಷೆಗೆ ಹಾಜರಾಗಬೇಕು ಎಂದು ಕೆಇಎ ಹೇಳಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ