ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್‍ಲ್ಲಿ ಅಂತಿಮ ವಿಚಾರಣೆ ನಡೆಯುತ್ತಿದೆ. ಈ ನಡುವೆ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮೆರೆಯುತ್ತಿರುವ ಅಲ್ಲಿನ ಸರ್ಕಾರ ಮತ್ತು ಮರಾಠಿ ಪುಂಡರ ವಿರುದ್ಧ ಕನ್ನಡಿಗರ ಕೆರಳಿ ಕೆಂಡವಾಗಿದ್ದಾರೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಮಹಾಂತೇಶ ನಗರ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಮಹಾಪುಂಡರ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ, ಡಿಸಿಎಂ ದೇವೇಂದ್ರ ಫಡ್ನವಿಸ್ ಪ್ರತಿಕೃತಿ ಅಣಕು ಮೆರವಣಿಗೆ ಮಾಡಿ ಬಳಿಕ ಪ್ರತಿಕೃತಿ ದಹನ ಮಾಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಮಹಾರಾಷ್ಟ್ರ ಪಾಸಿಂಗ್ ಹೊಂದಿದ್ದ ಗೂಡ್ಸ್ ವಾಹನ ಮೇಲೆ ಏಕಾಏಕಿ ದಾಳಿ ಮಾಡಿದ ಕರವೇ ಕಾರ್ಯಕರ್ತರು ಕಪ್ಪು ಮಸಿ ಬಳಿದು ವೈಪರ್ ಮುರಿದು ಹಾಕಿದರು. ಇದೇ ವೇಳೆ ಗೂಡ್ಸ್ ವಾಹನದ ಮುಂಭಾಗದ ಗಾಜು ಒಡೆಯಲು ಂiÀತ್ನಿಸಿದ ಕರವೇ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ವೇಳೆ ಪೆÇಲೀಸರು ಹಾಗೂ ಕರವೇ ಕಾರ್ಯಕರ್ತರ ಮಧ್ಯೆ ತಳ್ಳಾಟ ನೂಕಾಟ ನಡೆಯಿತು.