ಬೆಂಗಳೂರು : ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ರಾಜ್ಯ ಕಾಂಗ್ರೆಸ್ ಇದೀಗ ಎಸ್ ಸಿ ಎಸ್ ಟಿ ಐಕ್ಯತಾ ಸಮಾವೇಶಕ್ಕೆ ದಿನಾಂಕ ನಿಗದಿ ಮಾಡಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮತಗಳನ್ನು ಸೆಳೆಯುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷವು ಬೃಹತ್ ಸಮಾವೇಶ ಆಯೋಜಿಸಬೇಕು ಎಂಬ ಪ್ರಸ್ತಾವವನ್ನು ಶಾಸಕ ಜಿ. ಪರಮೇಶ್ವರ್ ಅವರು ಕಾಂಗ್ರೆಸ್ ನಾಯಕರ ಮುಂದಿಟ್ಟಿದ್ದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ, ಪರಮೇಶ್ವರ್ ಮುಖಂಡರಾದ ಕೆ.ಹೆಚ್. ಮುನಿಯಪ್ಪ, ಹೆಚ್. ಸಿ. ಮಹಾದೇವಪ್ಪ ಸಭೆ ಸೇರಿ ಈ ಕುರಿತು ಚರ್ಚೆ ನಡೆಸಿದ್ದರು.
ಇದೀಗ ರಾಜ್ಯ ಕಾಂಗ್ರೆಸ್ ಜನವರಿ 8 ರಂದು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪರಿಶಿಷ್ಟ ಜಾತಿ(SC) ಪರಿಶಿಷ್ಟ ಪಂಗಡ (ST) ಐಕ್ಯತಾ ಸಮಾವೇಶ ನಡೆಸಲು ನಿರ್ಧರಿಸಿದೆ.ಕಲ್ಯಾಣ ಕರ್ನಾಟಕದಲ್ಲಿ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಒಂದು ಸಮಾವೇಶವನ್ನು ನಡೆಸಲು ನಿರ್ಧರಿಸಲಾಗಿದೆ.
Laxmi News 24×7