ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಾಜಕೀಯ ಜೋರಾಗಿದ್ದು. ಮಾಜಿ ಸಚಿವ ರಮೇಶ ಜಾರಕಿಹೊಳಿ ಫಿಲ್ಡಿಗಿಳಿಯುವ ಮೂಲಕ ಎದುರಾಳಿಗಳಿಗೆ ನಡುಕ ಹುಟ್ಟಿಸಿದ್ದಾರೆ.
ಹೌದು ಮೊನ್ನೆಯಷ್ಟೇ ಹಿಂಡಲಗಾ ಗ್ರಾ.ಪಂ. ಅಧ್ಯಕ್ಷ ನಾಗೇಶ ಮನ್ನೋಳ್ಕರ್‍ನ್ನು ಕರೆದುಕೊಂಡು ಸಿಎಮ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದ ರಮೇಶ ಜಾರಕಿಹೊಳಿ ಇದೀದ ಮಾಜಿ ಸಿಎಂ ಜಗದೀಶ ಶೆಟ್ಟರ್ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಕೂಡ ನಾಗೇಶ ಮನ್ನೋಳ್ಕರ್ ಜೊತೆಗೆ ಹೋಗಿ ಭೇಟಿ ಮಾಡಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಫೋಟೋಗಳು ಅಧ್ಯ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿವೆ. ಇನ್ನು ನಿನ್ನೆ ಸಾಂಬ್ರಾ ಜಿ.ಪಂ. ವ್ಯಾಪ್ತಿಯ ಬಿಜೆಪಿ ಮುಖಂಡರ ಜೊತೆಗೆ ಸಭೆ ಮಾಡಿರುವ ರಮೇಶ ಜಾರಕಿಹೊಳಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲೇಬೇಕು ಎಂದು ಕರೆ ಕೊಟ್ಟಿದ್ದಾರೆ. ಆ ನಿಟ್ಟಿನಲ್ಲಿ ಈಗಿನಿಂದಲೇ ಕಾರ್ಯಪವೃತ್ತರಾಗುವಂತೆ ತಮ್ಮ ಕಾರ್ಯಕರ್ತರಿಗೆ ಹೇಳಿದ್ದಾರೆ.
ಒಟ್ಟಾರೆ ಗ್ರಾಮೀಣ ಕ್ಷೇತ್ರದಲ್ಲಿ ತಮ್ಮ ಬದ್ಧವೈರಿ ಲಕ್ಷ್ಮೀ ಹೆಬ್ಬಾಳ್ಕರ್ ಸೋಲಿಸಲು ರಮೇಶ ಜಾರಕಿಹೊಳಿ ರಣತಂತ್ರ ಹೆಣೆಯುತ್ತಿದ್ದು. ಇದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಯಾವ ರೀತಿ ಕೌಂಟರ್ ಕೊಡುತ್ತಾರೆ ಎಂದು ಕಾದು ನೋಡಬೇಕಿದೆ.