ಮಹಾರಾಷ್ಟ್ರದ ಗಡಿಯಲ್ಲಿ ಕನ್ನಡ ಮಾತನಾಡುವ ಜತ್, ಅಕ್ಕಲಕೋಟ್ ಮತ್ತು ಸೊಲ್ಲಾಪುರ ಮತ್ತಿತರ ಪ್ರದೇಶಗಳು ಕರ್ನಾಟಕಕ್ಕೆ ಸೇರಬೇಕಾದವು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ ನಂತರ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಣ ಗಡಿ ವಿವಾದಲ್ಲಿ ಹೊಸ ಮಾತಿನ ಸಮರ ಶುರುವಾಗಿದೆ. ಬೆಳಗಾವಿ: ಮಹಾರಾಷ್ಟ್ರದ ಗಡಿಯಲ್ಲಿ ಕನ್ನಡ ಮಾತನಾಡುವ ಜತ್, ಅಕ್ಕಲಕೋಟ್ ಮತ್ತು ಸೊಲ್ಲಾಪುರ ಮತ್ತಿತರ ಪ್ರದೇಶಗಳು ಕರ್ನಾಟಕಕ್ಕೆ ಸೇರಬೇಕಾದವು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ ನಂತರ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಣ ಗಡಿ ವಿವಾದಲ್ಲಿ ಹೊಸ ಮಾತಿನ ಸಮರ ಶುರುವಾಗಿದೆ.
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಗ್ರಾಮಸ್ಥರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಘೋಷಣೆ ಕೂಗಿದ್ದಾರೆ. ದಶಕಗಳಿಂದ ನೀರು, ಶಿಕ್ಷಣ ಮತ್ತು ಆರೋಗ್ಯ ಸೇವೆಯನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಕರ್ನಾಟಕದ ಗಡಿಭಾಗದಲ್ಲಿರುವ ಜತ್ ತಾಲೂಕಿನ ತಿಕೊಂಡಿ ಗ್ರಾಮದ ನಿವಾಸಿಗಳು ಶನಿವಾರ ರ್ಯಾಲಿ ನಡೆಸಿದ್ದು, ತಮಗೆ ನೀರು ನೀಡದ ಮತ್ತು ಆರೋಗ್ಯ ಮತ್ತು ಶಿಕ್ಷಣ ಸೌಲಭ್ಯಗಳನ್ನು ಅಭಿವೃದ್ಧಿಪಡಿಸದ ಮಹಾರಾಷ್ಟ್ರದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಗಡಿ ಕೇವಲ ಮೂರು ಕಿಲೋಮೀಟರ್ ದೂರದಲ್ಲಿದ್ದು, ಮಕ್ಕಳು ನೆರೆಯ ರಾಜ್ಯದ ಬಿಜಾಪುರದ ಕಾಲೇಜುಗಳಿಗೆ ಹೋಗುತ್ತಾರೆ, ಅದು 25 ಕಿಲೋಮೀಟರ್ ದೂರದಲ್ಲಿದೆ.
40 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಮಹೈಸಾಲ್ ಯೋಜನೆಯಿಂದ ನೀರು ಕೊಡುವುದಾಗಿ ಭರವಸೆ ನೀಡಿದ್ದಾರೆ. ಆದರೆ, ನಾಲ್ಕು ದಶಕಗಳು ಕಳೆದರೂ ನಮಗೆ ನೀರು ಸಿಕ್ಕಿಲ್ಲ ಎಂದು ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ನಿವಾಸಿಗಳಲ್ಲಿ ಒಬ್ಬರಾದ ಸೋಮ್ಲಿಂಗ್ ಚೌಧರಿ ಹೇಳಿದರು.