Home / ಜಿಲ್ಲೆ / ಬೆಳಗಾವಿ / ಸಿಬಿಐ ದಾಳಿಯನ್ನು ಕಾಂಗ್ರೆಸ್ ನಾಯಕರು ವಿನಾಕಾರಣ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ

ಸಿಬಿಐ ದಾಳಿಯನ್ನು ಕಾಂಗ್ರೆಸ್ ನಾಯಕರು ವಿನಾಕಾರಣ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ

Spread the love

ಬೆಳಗಾವಿ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ನಡೆದಿರುವ ಸಿಬಿಐ ದಾಳಿಯನ್ನು ಕಾಂಗ್ರೆಸ್ ನಾಯಕರು ವಿನಾಕಾರಣ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ’ ಎಂದು ರಾಜ್ಯಸಭಾ ಸದಸ್ಯ, ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಆಧ್ಯಕ್ಷ ಈರಣ್ಣ ಕಡಾಡಿ ಆರೋಪಿಸಿದರು.

ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ಹಣಕಾಸಿನ ವ್ಯವಹಾರ, ಲೆಕ್ಕಪತ್ರದಲ್ಲಿ ಸರಿಯಾದ ಮಾಹಿತಿ ಒದಗಿಸದ ಕಾರಣ ಡಿ.ಕೆ. ಶಿವಕುಮಾರ್‌ ಮನೆ ಮೇಲೆ ಈ ಹಿಂದೆಯೂ ಇಡಿ ಮತ್ತು ಐಟಿ ದಾಳಿಯಾಗಿತ್ತು. ಆಗ ಅಪಾರ ಪ್ರಮಾಣದ ಆಸ್ತಿಪಾಸ್ತಿಗೆ ಸಮರ್ಪಕ ದಾಖಲೆಗಳಿಲ್ಲದಿರುವುದು ಬಹಿರಂಗವಾಗಿತ್ತು. ಅದರ ಮುಂದುವರಿದ ಭಾಗವಾಗಿ ಈಗ ಮತ್ತೆ ದಾಳಿ ನಡೆದಿದೆ’ ಎಂದರು.

‘ಹಿಂದಿನ ತನಿಖೆ ಇನ್ನೂ ಪೂರ್ಣವಾಗಿಲ್ಲ.

ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುತ್ತವೆ. ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ. ಕಾಂಗ್ರೆಸ್ ನಾಯಕರು ಎಲ್ಲದರಲ್ಲೂ ರಾಜಕೀಯ ಮಾಡಬಾರದು’ ಎಂದು ಹೇಳಿದರು.

‘ಸುರೇಶ ಅಂಗಡಿ ಅವರ ಅಂತ್ಯಕ್ರಿಯೆಯನ್ನು ದೆಹಲಿಯಲ್ಲಿ ಕೋವಿಡ್-19 ನಿಯಮಾವಳಿ ಅನುಸರಿಸಿ, ಗೌರವಯುತವಾಗಿ ನೆರವೇರಿಸಲಾಗಿದೆ. ಹೀಗಿರುವಾಗ ಅಂಗಡಿ ಅವರ ಕುಟುಂಬದವರಿಗೆ ನಮ್ಮ ಸರ್ಕಾರ ನ್ಯಾಯ ಒದಗಿಸಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮೊದಲಾದವರು ಗುಲ್ಲೆಬ್ಬಿಸುವುದರಲ್ಲಿ ಅರ್ಥವಿಲ್ಲ’ ಎಂದು ತಿರುಗೇಟು ನೀಡಿದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ