Breaking News

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಭರ್ಜರಿ ಸಿಹಿ ಸುದ್ದಿ

Spread the love

ಬೆಂಗಳೂರು: ರಾಜ್ಯ ಸರ್ಕಾರ ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ ನೀಡಿದ್ದು, ಮನೆ ಖರೀದಿ ಹೊರೆ ಇಳಿಕೆ ಮಾಡಿದೆ.

ಮುಖ್ಯಮಂತ್ರಿಗಳ ಒಂದು ಲಕ್ಷ ಬಹು ಮಹಡಿ ವಸತಿ ಯೋಜನೆ ಅಡಿಯಲ್ಲಿ ಮನೆ ಖರೀದಿ ಮೊತ್ತವನ್ನು ಮತ್ತಷ್ಟು ಕಡಿಮೆ ಮಾಡಲಾಗಿದೆ.

ಸಾಮಾನ್ಯ ವರ್ಗದವರಿಗೆ ಪ್ರತಿ ಮನೆಗೆ 7.9 ಲಕ್ಷ ರೂ. ನಿಗದಿಯಾಗಿದ್ದು ಇದನ್ನು 6.5 ಲಕ್ಷ ರೂಗೆ ಇಳಿಕೆ ಮಾಡಲಾಗಿದೆ.

ಅದೇ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ 7.10 ಲಕ್ಷ ರೂ.ನಿಗದಿಯಾಗಿದ್ದು, ಈ ಮೊತ್ತವನ್ನು 6 ಲಕ್ಷ ರೂಪಾಯಿಗೆ ಇಳಿಕೆ ಮಾಡಲಾಗಿದೆ. ಸರ್ಕಾರದಿಂದಲೇ ಮೂಲ ಸೌಕರ್ಯ ಬಾಬ್ತು 2.09 ಲಕ್ಷ ರೂ. ಭರಿಸಲಾಗುವುದು. ಹೀಗೆ ಮುಖ್ಯಮಂತ್ರಿಗಳ ಒಂದು ಲಕ್ಷ ಬಹು ಮಹಡಿ ವಸತಿ ಯೋಜನೆ ಅಡಿಯಲ್ಲಿ ಮನೆ ಖರೀದಿ ಮೊತ್ತವನ್ನು ಸರ್ಕಾರ ಮತ್ತಷ್ಟು ಇಳಿಕೆ ಮಾಡಿ ಹೊರೆ ಕಡಿಮೆ ಮಾಡಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ