ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, ಇಂದು 108 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ( Police Inspector Transfer) ಮಾಡಿ ಆದೇಶಿಸಿದೆ.
ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ಕರ್ನಾಟಕ ಪೊಲೀಸ್ ಇಲಾಖೆಯು ( Karnataka Police Department ), ರಾಜ್ಯ ಗುಪ್ತ ವಾರ್ತೆ, ಸಿಐಡಿ, ಕರ್ನಾಟಕ ಲೋಕಾಯುಕ್ತ ಸೇರಿದಂತೆ ವಿವಿಧ ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿದೆ.
ಇದಷ್ಟೇ ಅಲ್ಲದೇ ಸಿಸಿಬಿ, ಕೆ ಎಸ್ ಆರ್ ಪಿ ಟಿ ಎಸ್, ಸಿಇಎನ್, ಸೈಬರ್ ಕ್ರೈಂ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗಳನ್ನು ಎತ್ತಂಗಡಿ ಮಾಡಿ ಆದೇಶಿಸಿದ್ದಾರೆ.