Breaking News

ಹುಬ್ಬಳ್ಳಿಯಲ್ಲಿ ವರುಣನ ಅಬ್ಬರ- ರಾಷ್ಟ್ರೀಯ ಹೆದ್ದಾರಿ ಬಂದ್, ಟ್ರಾಫಿಕ್ ಜಾಮ್

Spread the love

ಹುಬ್ಬಳ್ಳಿ/ಮೈಸೂರು: ನಗರದಲ್ಲಿಂದು ಧಾರಾಕಾರವಾಗಿ ಮಳೆ ಸುರಿದಿದ್ದು, ಮಧ್ಯಾಹ್ನ ಒಂದು ಗಂಟೆಗೂ ಅಧಿಕ ಕಾಲ ಸುರಿದ ಭಾರೀ ಮಳೆಗೆ ಹುಬ್ಬಳ್ಳಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ.

ಭಾರೀ ಮಳೆಯಿಂದಾಗಿ ಹುಬ್ಬಳ್ಳಿಯ ಕುಂದಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ಸೇತುವೆ ಕಾಮಗಾರಿಯಿಂದಾಗಿ ರಸ್ತೆ ಸಂಚಾರ ಸ್ಥಗಿತಗೊಂಡಿತು. ಮಳೆಯ ನೀರು ಹೆಚ್ಚು ಬಂದ ಪರಿಣಾಮ ಕೆಲಕಾಲ ರಸ್ತೆ ಸಂಚಾರ ಬಂದ್ ಆಗಿತ್ತು.

ಹೀಗಾಗಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಾಕಷ್ಟು ಟ್ರಾಫಿಕ್ ಜಾಮ್ ಉಂಟಾಗಿತ್ತು. ಹುಬ್ಬಳ್ಳಿ- ಕುಂದಗೋಳ ರಸ್ತೆ ಹಾಗೂ ಹುಬ್ಬಳ್ಳಿ ಬೆಂಗಳೂರು ಮಾರ್ಗವಾಗಿ ಸಂಚರಿಸುವ ಪ್ರಯಾಣಿಕರು ಪರದಾಡುವಂತಾಯಿತು.ನೂರಾರು ವಾಹನಗಳು ರಸ್ತೆಯಲ್ಲಿಯೇ ನಿಂತಿದ್ದವು. ರಸ್ತೆಯಲ್ಲಿ ನೀರಿನ ಪ್ರಮಾಣ ಕಡಿಮೆ ಆದ ಬಳಿಕ ಟ್ರಾಫಿಕ್ ಜಾಮ್ ಸ್ವಲ್ಪ ತಗ್ಗಿತು. ಹೆದ್ದಾರಿಯಲ್ಲಿ ಸೇತುವೆ ಕಾಮಗಾರಿ ನಡೆಯುತ್ತಿರುವ ಪರಿಣಾಮ ಮಳೆ ನೀರಿನಿಂದ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು. ಹೀಗಾಗಿ ಕೆಲ ಕಾಲ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಾಹನ ಸವಾರರು ಪರದಾಡುವಂತಾಯಿತು. ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆ ಇಂದು ಮತ್ತೆ ಸುರಿಯಿತು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ