ಇದೇ 30ರಂದು ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಸುಪ್ರೀಂಕೋರ್ಟನಲ್ಲಿ ಅಂತಿಮ ವಿಚಾರಣೆ ನಡೆಯಲಿದೆ. ಹೀಗಾಗಿ ಇಂದು ಗಡಿ ತಾಲೂಕು ನಿಪ್ಪಾಣಿಯಲ್ಲಿ ಎಡಿಜಿಪಿ ಅಲೋಕ ಕುಮಾರ ನೇತೃತ್ವದಲ್ಲಿ ಹೈ ಅರ್ಲಟ್ ಸಭೆ ನಡೆಯಿತು.
ನಿಪ್ಪಾಣಿ ನಗರದ ಪ್ರವಾಸಿ ಮಂದಿರದಲ್ಲಿ ಎಡಿಜಿಪಿ ಅಲೋಕ್‍ಕುಮಾರ್ ನಡೆಸಿದ ಹೈವೋಲ್ಟೇಜ್ ಸಭೆಯಲ್ಲಿ ರಾಜ್ಯದ ಬೀದರ, ಕಲಬುರಗಿ, ವಿಜಯಪುರ, ಬೆಳಗಾವಿ ಜಿಲ್ಲೆಯ ಜಿಲ್ಲಾ ಪೆÇಲೀಸ್ ವರಿμÁ್ಠದಿಕಾರಿಗಳು ಭಾಗಿಯಾಗಿದ್ದರು. ಅದೇ ರೀತಿ ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರ, ಸಾಂಗಲಿ, ಸಾತಾರಾ, ಸಿಂಧದುರ್ಗ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ವಿಡಿಯೋ ಕಾನ್ಫರೆನ್ಸನಲ್ಲಿ ಭಾಗಿಯಾಗಿದ್ದರು. ಇತ್ತೀಚಿನ ದಿನಗಳಲ್ಲಿ ರಾಜ್ಯದ ಗಡಿ ವಿಷಯ ಸೇರಿದಂತೆ ಎರಡೂ ರಾಜ್ಯಗಳಲ್ಲಿ ಶಾಂತಿ ಕಾಪಾಡುವ ಸಲುವಾಗಿ ಮತ್ತು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಗಲಭೆ ಇನ್ನಿತರ ಅಪರಾಧದ ಪ್ರಕರಣಗಳ ಕುರಿತು ಸಭೆಯಲ್ಲಿ ಚರ್ಚೆನಡೆಸಲಾಯಿತು. ಈ ವೇಳೆ ಮಾತನಾಡಿದ ಅಲೋಕಕುಮಾರ್ ಅವರು ಗಡಿ ವಿವಾದ ಸಂಬಂಧ ಚರ್ಚಿಸಲು ಬಂದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ.
ಬೇರೆ ಖಾಸಗಿ ಕಾರ್ಯಕ್ರಮಗಳಿಗೆ ಬಂದರೆ ಯಾವುದೇ ಸಮಸ್ಯೆ ಇಲ್ಲ ಎಂದರು. ಓಪನ್ ಆಗಿಯೇ ಮಹಾ ಸಚಿವರು ಟ್ವಿಟ್ ಮಾಡಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ನಾನು ಕೂಡ ಓಪನ್ ಆಗಿಯೇ ಹೇಳುತ್ತಿದ್ದೇನೆ. ಗಡಿ ವಿವಾದ ಸಂಬಂಧ ಚರ್ಚಿಸಿದ್ರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಗಡಿ ಭಾಗದ ಬೆಳಗಾವಿ ಜಿಲ್ಲೆಯ 21 ಚೆಕ್‍ಪೋಸ್ಟಗಳಲ್ಲಿ ಸೂಕ್ತ ಬಂದೋಬಸ್ತ್ ಮಾಡಲಿದ್ದೇವೆ ಎಂದರು.