ನವದೆಹಲಿ: ತಮ್ಮ ಪಕ್ಷದಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಎಂದು ಕಾಂಗ್ರೆಸ್ ಲೆಕ್ಕ ಹಾಕಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.
ಸೈಲೆಂಟ್ ಸುನೀಲ್ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ ವಿಚಾರದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.
ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸಮಯ ಕೇಳಿದ್ದು, ನಾಳೆ ಸಮಯ ದೊರೆಯುವ ವಿಶ್ವಾಸವಿದೆ ಎಂದರು.
ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಭೂಪೇಂದ್ರ ಯಾದವ್ ಮತ್ತು ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದು, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆಗೆ ಮೇಕೆದಾಟು, ಭದ್ರಾ ಮೇಲ್ಡಂಡೆ ಯೋಜನೆ, ಮಹದಾಯಿ ಬಗ್ಗೆ ಚರ್ಚೆ ಮಾಡಲಿರುವುದಾಗಿ ತಿಳಿಸಿದರು.