Breaking News

ಇಡೀ ರಾಜ್ಯದಲ್ಲಿಯೇ ಗೋಕಾಕ್ ಮಾದರಿ ಕ್ಷೇತ್ರವನ್ನಾಗಿ ಮಾಡುವೆ: ರಮೇಶ ಜಾರಕಿಹೊಳಿ

Spread the love

ಗೋಕಾಕ್ ತಾಲೂಕಿನಲ್ಲಿ ಅಂಕಲಗಿ ಮತ್ತು ಅಕ್ಕತಂಗೇರಹಾಳ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಭೂಮಿ ಪೂಜೆ ನೆರವೇರಿಸಿದರು.

ನಗರೋತ್ತಾನ ಯೋಜನೆಯಡಿ 5 ಕೋಟಿ ರೂಪಾಯಿ ಮತ್ತು 15ನೇ ಹಣಕಾಸಿನ ಯೋಜನೆಯಡಿ 2.5 ಕೋಟಿ ರೂಪಾಯಿ ವೆಚ್ಛದಲ್ಲಿ ರಸ್ತೆ ನಿರ್ಮಾಣ ಸೇರಿ ಇನ್ನಿತರ ಕಾಮಗಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು 20ಕ್ಕೂ ಹೆಚ್ಚು ವರ್ಷಗಳ ಕಾಲ ತಮ್ಮ ಸೇವೆ ಮಾಡಲು ನನಗೆ ಅವಕಾಶ ಮಾಡಿಕೊಟ್ಟಿದ್ದಿರಿ. ನಿಮಗೆ ನಾನು ಎಂದೆಂದಿಗೂ ಚಿರಋಣಿ ಆಗಿರುತ್ತೇನೆ.ಬರುವ ದಿನಗಳಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿ ಕೈಗೊಂಡು ಇಡೀ ರಾಜ್ಯದಲ್ಲಿಯೇ ಗೋಕಾಕ್ ಮಾದರಿ ಕ್ಷೇತ್ರವನ್ನಾಗಿ ಮಾಡುವೆ ಎಂದು ಸಾರ್ವಜನಿಕರಿಗೆ ರಮೇಶ ಜಾರಕಿಹೊಳಿ ಭರವಸೆ ನೀಡಿದರು.

ಈ ವೇಳೆ ಆಪ್ತಸಹಾಯಕ ಭೀಮನಗೌಡ ಪೊಲೀಸ್‍ಗೌಡರ, ಮುಖ್ಯ ಅಭಿಯಂತರ ಮನಗೂಳಿ, ಮಂಜುನಾಥ ಗಡಾದ, ಮುನ್ನಾ ದೇಸಾಯಿ, ಬಿಜೆಪಿ ಮುಖಂಡೆ ಅನ್ನಪೂರ್ಣಾ ನಿರ್ವಾಣಿ ಸೇರಿ ಇನ್ನಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ