ಬೆಳಗಾವಿ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಕ್ಲಿಂಗ್ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಸೈಕ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷ ಅನಿಲ್ ಪೋತದಾರ ಮಾಹಿತಿ ನೀಡಿದ್ದಾರೆ.
ಬುಧವಾರ ಮಹಾಂತೇಶ ನಗರದಲ್ಲಿರುವ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅನಿಲ್ ಪೋತದಾರ ಬೆಳಗಾವಿಯಲ್ಲಿ ಜಿಲ್ಲಾ ಸೈಕ್ಲಿಂಗ್ ಅಸೊಸಿಯೇಷನ್ ಕಾರ್ಯ ನಿರ್ವಹಿಸುತ್ತಿದ್ದು. ಕೆಂಎಫ್ ಜಿಲ್ಲಾಧ್ಯಕ್ಷ ವಿವೇಕರಾವ್ ಪಾಟೀಲ್ ಅವರ ತಂದೆಯವರಾದ ದಿ.ವಿ.ಎಲ್.ಪಾಟೀಲ್ ಅವರು ಈ ಅಸೊಸಿಯೇಷನ್‍ನ ಸಂಸ್ಥಾಪಕ ಅಧ್ಯಕ್ಷರಾಗಿದ್ದಾರೆ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀ ಮಟ್ಟದಲ್ಲಿ ಸೈಕ್ಲಿಂಗ್‍ಗೆ ಉತ್ತೇಜನ ನೀಡಲಾಗುತ್ತಿದೆ. ಇದೀಗ ಗ್ರಾಮೀಣ ಮಟ್ಟದ ಸೈಕ್ಲಿಂಗ್ ಪಟುಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 15 ಶೈಕ್ಷಣಿಕ ತಾಲೂಕುಗಳ ಪ್ರೌಢಶಾಲೆಗಳ 8ರಿಂದ 10ನೇ ತರಗತಿಯ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ತರಬೇತಿ ನೀಡಲು ಯೋಜಿಸಿದೆ.
ಇದೇ ಡಿಸೆಂಬರ್ 1ರಿಂದ ಡಿ.30ರವರೆಗೆ ಜಿಲ್ಲೆಯ 15 ಶೈಕ್ಷಣಿಕ ತಾಲೂಕುಗಳಲ್ಲಿ ಸೈಕ್ಲಿಂಗ್ ಸ್ಪರ್ಧೆ ನಡೆಯಲಿದೆ. ಆ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ ಮತ್ತು ಚಿಕ್ಕೋಡಿ ವಿಭಾಗ, ಜಿಲ್ಲಾ ಸೈಕ್ಲಿಂಗ್ ಅಸೊಸಿಯೇಷನ್ ಸಹಯೋಗದಲ್ಲಿ ಆಯ್ಕೆ ಮಾಡಲಾಗುತ್ತಿದೆ. ತಾಲೂಕಾ ಮಟ್ಟದ ಪ್ರೌಢಶಾಲೆಗಳಿಂದ 50 ಗಂಡು ಮಕ್ಕಳು, 25 ಹೆಣ್ಣು ಮಕ್ಕಳು ಒಟ್ಟು 75 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಿ. ಪ್ರತಿ ತಾಲೂಕಿನಿಂದ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಸಹ ಇವರುಗಳಿಗೆ ಸ್ಪರ್ಧಿಸಲು ನೆರವಾಗುವಂತೆ ತರಬೇತಿ ನೀಡಲಾಗುವುದು.