ಸಂಚಾರ ಮಾಡಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಸಮಸ್ಯೆ ಹೇಳ ತೀರದಾಗಿದೆ. ತರಗತಿಗೆ ಹಾಜರಾಗುವುದಕ್ಕಿಂತ ವಿದ್ಯಾರ್ಥಿಗಳು ಬಸ್ ಸೌಲಭ್ಯಕ್ಕಾಗಿ ಪರದಾಡುತ್ತಿರುವುದೇ ಹೆಚ್ಚಾಗಿದೆ.
ಹೌದು.. ಬಸ್‌ಗಾಗಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಗಂಬ್ಯಾಪೂರ ಗ್ರಾಮದಲ್ಲಿ ನಡೆದಿದೆ.
ಸರಿಯಾದ ಸಮಯಕ್ಕೆ ಬಸ್ ಬಿಡದ ಸಾರಿಗೆ ಇಲಾಖೆ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಶಾಲಾ-ಕಾಲೇಜುಗಳಿಗೆ ಹೋಗಲು ತೊಂದರೆ ಆಗುತ್ತಿದೆ. ಬಸ್ ಬರದ ಕಾರಣ ತರಗತಿಯಿಂದ ದೂರ ಉಳಿಯುತ್ತಿದ್ದೇವೆ. ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಿ ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.