Breaking News

ತಾನೇ ತೋಡಿದ ಗುಂಡಿಗೆ ಬಿದ್ದ ಮ.ಹಾ.ಸರ್ಕಾರ..!

Spread the love

ವಿಜಯಪುರ: ಮಹಾರಾಷ್ಟ್ರ ಗಡಿ ಅಧ್ಯಾಯ ಅಂತಿಮಗೊಂಡಿದ್ದರೂ ಅನವಶ್ಯಕವಾಗಿ, ತಮ್ಮ ರಾಜಕೀಯ ವಿಷಯಗಳನ್ನು ಮರೆಮಾಚಲು ಕ್ಯಾತೆ ತೆಗೆಯಲಾಗುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಶಾಸಕ ಎಂ.ಬಿ. ಪಾಟೀಲ ವಾಗ್ದಾಳಿ ನಡೆಸಿದರು.

ಮಹಾರಾಷ್ಟ್ರಕ್ಕೆ ತನ್ನ ಅಸ್ತ್ರವೇ ತಿರುಗುಬಾಣವಾಗಿದೆ. ಸೋಲಾಪುರದಲ್ಲಿ ಕನ್ನಡಿಗರೇ ಹೆಚ್ಚಿದ್ದಾರೆ. ಅಕ್ಕಲಕೋಟೆ ಹಾಗೂ ಜತ್ತ ತಾಲೂಕಿನಲ್ಲಿ ಕನ್ನಡಿಗರಿದ್ದಾರೆ. ಈ ಎಲ್ಲ ಕನ್ನಡಿಗರು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕೆಂದು ಹೋರಾಟ ಆರಂಭಿಸಿದ್ದು, ಇದೀಗ ಮಹಾರಾಷ್ಟ್ರಕ್ಕೆ ತನ್ನ ಅಸ್ತ್ರವೇ ಮುಳ್ಳಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

ಈಗಾಗಲೇ ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜ ಹಾರಿಸಲಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ಠರಾವು ಮಂಡಿಸಿದ್ದಾರೆ. ಮಾತ್ರವಲ್ಲ, ಕನ್ನಡ ಭುವನೇಶ್ವರಿ ಫೋಟೋ ಮೆರವಣಿಗೆ ನಡೆಸಿದ್ದಾರೆ. ಇದಕ್ಕೆಲ್ಲ ಕಾರಣ ಮಹಾರಾಷ್ಟ್ರದ ನಿರ್ಲಕ್ಷ್ಯ. ಗಡಿಭಾಗದ ಹಳ್ಳಿಗಳು ಇಂದಿಗೂ ಮೂಲ ಸೌಕರ್ಯಗಳಿಂದ ವಂಚಿತಗೊಂಡಿವೆ. ಈ ಹಳ್ಳಿಗಳು ಮಹಾರಾಷ್ಟ್ರದ ಮಹಿಶಾಳ ನೀರಾವರಿ ಯೋಜನೆ ಅನುಷ್ಟಾನಗೊಳ್ಳದ ಕಾರಣಕ್ಕೆ ಕರ್ನಾಟಕದ ನೀರಿನ ಮೇಲೆ ಅವಲಂಬಿತವಾಗಿವೆ. ಈ ಹಿಂದೆ ಮಾನವೀಯತೆ ದೃಷ್ಟಿಯಿಂದ ಮಹಾರಾಷ್ಟ್ರಕ್ಕೆ ನೀರು ಹರಿಸಲಾಗಿತ್ತು. ಹೀಗಾಗಿ ಅಲ್ಲಿನ ಹಳ್ಳಿಗಳು ಕರ್ನಾಟಕಕ್ಕೆ ಸೇರ್ಪಡೆ ಮಾಡಲು ಹೋರಾಟ ಆರಂಭಿಸಿವೆ. ಪರಿಸ್ಥಿತಿ ಹೀಗಿರುವಾಗ ಕರ್ನಾಟಕದ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರ್ಪಡೆಯಾಗಬೇಕೆಂದಿರುವುದು ಎಷ್ಟು ಸಮಂಜಸ ಎಂದು ಎಂ.ಬಿ. ಪಾಟೀಲ ಪ್ರಶ್ನಿಸಿದರು.

 


Spread the love

About Laxminews 24x7

Check Also

ಬಸವ‌ ಸಂಸ್ಕೃತಿ ಯಾತ್ರೆ ಹೆಸರಲ್ಲಿ ಸಮಾಜ ಒಡೆಯೋ ಕೆಲಸ ಮಾಡುತ್ತಿದ್ದಾರೆ

Spread the love ಬಸವ‌ ಸಂಸ್ಕೃತಿ ಯಾತ್ರೆ ಹೆಸರಲ್ಲಿ ಸಮಾಜ ಒಡೆಯೋ ಕೆಲಸ ಮಾಡುತ್ತಿದ್ದಾರೆ ಬಸವಣ್ಣನ ಹೆಸರಲ್ಲಿ ಕೆಲವರಿಂದ ಸಮಾಜ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ