Breaking News

ಆರ್‌ಎಸ್‌ಎಸ್‌ನವರು ಕಳ್ಳರು, ಸುಳ್ಳು ಹೇಳುತ್ತಾರೆ: ಸಿದ್ದರಾಮಯ್ಯ

Spread the love

ಮೈಸೂರು: ‘ಆರ್‌ಎಸ್‌ಎಸ್‌ನವರು ಕಳ್ಳರು, ಸುಳ್ಳು ಹೇಳುತ್ತಾರೆ’ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡಸಿದರು.

ಕರ್ನಾಟಕ ಪ್ರದೇಶ ಕುರುಬರ ಸಂಘ ನಗರ, ತಾಲ್ಲೂಕು ಹಾಗೂ ಜಿಲ್ಲಾ ಘಟಕದಿಂದ ಇಲ್ಲಿನ ಕಲಾಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಕನಕ ಜಯಂತ್ಯುತ್ಸವ, ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

 

‘ಪಟ್ಟಭದ್ರ ಹಿತಾಸಕ್ತಿಗಳು ಸಮಾಜದಲ್ಲಿ ಬದಲಾವಣೆ ಬಯಸುವುದಿಲ್ಲ. ಆರ್‌ಎಸ್‌ಎಸ್‌ನವರು ಬದಲಾವಣೆ ಬೇಡ ಎನ್ನುತ್ತಾರೆ. ಶೋಷಣೆ, ದೌರ್ಜನ್ಯ ಮಾಡುವುದಕ್ಕಾಗಿ ಅಸಮಾನತೆ ಇರಲೆಂದು ಬಯಸುತ್ತಾರೆ. ಮುಸ್ಲಿಮರನ್ನು ಬೆದರು‌ಬೊಂಬೆಯಾಗಿ ಇಟ್ಟುಕೊಂಡು ದೇಶವನ್ನು ಒಡೆಯುತ್ತಿದ್ದಾರೆ. ಸಂಘ ಪರಿವಾರದವರು ಬಹಳ ನಾಜೂಕಾಗಿ ಮಾತನಾಡುತ್ತಾರೆ. ಅವರ ಬಗ್ಗೆ ಎಚ್ಚರ ವಹಿಸಬೇಕು. ಜಾಗೃತರಾಗಬೇಕು’ ಎಂದರು.

‘ಆರ್‌ಎಸ್‌ಎಸ್‌ನವರು, ನಮ್ಮದು ದೇಶಭಕ್ತರನ್ನು ಹುಟ್ಟು ಹಾಕುತ್ತಿರುವ ಸಂಸ್ಥೆ ಎನ್ನುತ್ತಾರೆ. ಅವರಲ್ಲಿ ಯಾರಾದರೊಬ್ಬರು ದೇಶಕ್ಕಾಗಿ ತ್ಯಾಗ-ಬಲಿದಾನ ಮಾಡಿದ್ದಾರಾ? ಇದೆಲ್ಲವನ್ನೂ ತಿಳಿದುಕೊಂಡು, ವಿಚಾರವಂತರಾಗಬೇಕು. ಶಿಕ್ಷಣ ಪಡೆಯಬೇಕು. ಸಾಮಾಜಿಕ ಅವ್ಯವಸ್ಥೆಗೆ ಕಾರಣವಾದವರನ್ನು ದೂರವಿಡಬೇಕು’ ಎಂದು ತಿಳಿಸಿದರು.


Spread the love

About Laxminews 24x7

Check Also

ಬಸವ‌ ಸಂಸ್ಕೃತಿ ಯಾತ್ರೆ ಹೆಸರಲ್ಲಿ ಸಮಾಜ ಒಡೆಯೋ ಕೆಲಸ ಮಾಡುತ್ತಿದ್ದಾರೆ

Spread the love ಬಸವ‌ ಸಂಸ್ಕೃತಿ ಯಾತ್ರೆ ಹೆಸರಲ್ಲಿ ಸಮಾಜ ಒಡೆಯೋ ಕೆಲಸ ಮಾಡುತ್ತಿದ್ದಾರೆ ಬಸವಣ್ಣನ ಹೆಸರಲ್ಲಿ ಕೆಲವರಿಂದ ಸಮಾಜ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ