Breaking News

ಗುಜರಾತ್ ವಿಧಾನಸಭೆ ಚುನಾವಣೆ: ಇಂದು ಬೆಳಗ್ಗೆ 8 ಗಂಟೆಯಿಂದ ಮೊದಲ ಹಂತದ ಮತದಾನ ಪ್ರಾರಂಭ

Spread the love

ಗಾಂಧಿನಗರ (ಗುಜರಾತ್) : ಎಲ್ಲಾ ರಾಜಕೀಯ ಪಕ್ಷಗಳ ಬಿರುಸಿನ ಪ್ರಚಾರದ ನಂತರ ಗುಜರಾತ್(Gujarat) ಜನತೆ ಇಂದು (ಡಿ.1 ಗುರುವಾರ) ವಿಧಾನಸಭಾ ಚುನಾವಣೆ(Assembly election)ಯ ಮೊದಲ ಹಂತದ ಮತದಾನಕ್ಕೆ ಸಜ್ಜಾಗಿದ್ದಾರೆ.

ಕಛ್, ಸೌರಾಷ್ಟ್ರದ 19 ಜಿಲ್ಲೆಗಳಲ್ಲಿ 89 ಕ್ಷೇತ್ರಗಳನ್ನು ಹೊಂದಿರುವ ರಾಜಕೀಯ ಪಕ್ಷಗಳ ಭವಿಷ್ಯವನ್ನು ಇಂದು 2 ಕೋಟಿಗೂ ಹೆಚ್ಚು ಮತದಾರರು ನಿರ್ಧರಿಸಲಿದ್ದು, ಚುನಾವಣಾ ಭರವಸೆಗಳನ್ನು ನೀಡಲು ಬಿಜೆಪಿ, ಕಾಂಗ್ರೆಸ್ ಮತ್ತು ಆಸ್ಮ್ ಆದ್ಮಿ ಸೇರಿದಂತೆ ರಾಜಕೀಯ ಪಕ್ಷಗಳ ನಡುವೆ ಪೈಪೋಟಿ ನಡೆದಿದೆ

ಭಾರತೀಯ ಚುನಾವಣಾ ಆಯೋಗದ ಪ್ರಕಾರ, ಮತದಾನವು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಿ ಸಂಜೆ 5 ಗಂಟೆಗೆ ಮುಕ್ತಾಯಗೊಳ್ಳಲಿದೆ. ಒಟ್ಟು 39 ರಾಜಕೀಯ ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, 718 ಪುರುಷ ಅಭ್ಯರ್ಥಿಗಳು ಮತ್ತು 70 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 788 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ